ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget 2021: ಕನ್ನಡ ವಿಶ್ವವಿದ್ಯಾಲಯದಿಂದ ₹ 70 ಕೋಟಿ ಪ್ರಸ್ತಾವ

Last Updated 5 ಮಾರ್ಚ್ 2021, 10:48 IST
ಅಕ್ಷರ ಗಾತ್ರ

ಹೊಸಪೇಟೆ: ತೀವ್ರ ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ₹70 ಕೋಟಿ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.

‘ಪ್ರಸಾರಾಂಗದ ಪುಸ್ತಕಗಳ ಪ್ರಕಟಣೆ, ಸಂಶೋಧನೆ ಸೇರಿದಂತೆ ಇತರೆ ಚಟುವಟಿಕೆಗಳಿಗೆ ₹34 ಕೋಟಿ, ಯೋಜನೇತರ ಕೆಲಸಗಳಿಗೆ ₹36 ಕೋಟಿ ಅನುದಾನಕ್ಕೆ ಕೋರಲಾಗಿದೆ. ತಾತ್ಕಾಲಿಕ ನೌಕರರ ಸಂಬಳಕ್ಕಾಗಿ ₹6 ಕೋಟಿ ನೀಡುವಂತೆ ಪ್ರತ್ಯೇಕವಾಗಿ ಪತ್ರ ಬರೆಯಲಾಗಿದೆ.

ಕ್ರೀಡಾಂಗಣ, ಕಾಂಪೌಂಡ್‌ ನಿರ್ಮಾಣ, ಶಾಶ್ವತ ಕುಡಿಯುವ ನೀರಿನ ಯೋಜನೆ, ವಿದ್ಯುತ್‌ ದೀಪಗಳ ಅಳವಡಿಕೆ, ವಸತಿ ನಿಲಯ, ಅತಿಥಿ ಗೃಹ ದುರಸ್ತಿ, ನನೆಗುದಿಗೆ ಬಿದ್ದಿರುವ ಕಟ್ಟಡಗಳ ನಿರ್ಮಾಣ ಪೂರ್ಣಗೊಳಿಸುವುದು ಸೇರಿದಂತೆ ಇತರೆ ಕೆಲಸಗಳಿಗಾಗಿ ₹180 ಕೋಟಿಯ ಅಗತ್ಯವಿದೆ’ ಎಂದು ಕುಲಪತಿ ಪ್ರೊ.ಸ.ಚಿ. ರಮೇಶ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT