ಹೊಸಪೇಟೆ (ವಿಜಯನಗರ): ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ. ಸಿ.ಆರ್.ಗೋವಿಂದರಾಜು (53) ಭಾನುವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.

ಮೃತರಿಗೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಗೋವಿಂದರಾಜು ಅವರು ಬೆಂಗಳೂರಿನವರು. ಸೋಮವಾರ ನಗರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ಮಧ್ಯಾಹ್ನ ನಗರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗೆ ಮತಗಟ್ಟೆಯಲ್ಲಿ ಮತ ಚಲಾಯಿಸಿ ಮನೆಗೆ ತೆರಳಿದ್ದರು. ತೀವ್ರ ಎದೆನೋವು ಕಾಣಿಸಿಕೊಂಡಿದ್ದರಿಂದ ತಕ್ಷಣವೇ ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಗೊತ್ತಾಗಿದೆ.

ಎಂಟು ಪುಸ್ತಕ, ಐದು ಸಂಶೋಧನಾ ಲೇಖನಗಳನ್ನು ಬರೆದಿದ್ದರು. ವಿಶ್ವವಿದ್ಯಾಲಯದಲ್ಲಿ ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.