ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ ಹಂಪಿ ಸ್ಮಾರಕಗಳು

Last Updated 14 ಅಕ್ಟೋಬರ್ 2021, 11:27 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ನೂರು ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿದ ಪ್ರಯುಕ್ತ ಇಲ್ಲಿನ ವಿಶ್ವಪ್ರಸಿದ್ಧ ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.

ಹಂಪಿ ಕಲ್ಲಿನ ರಥ, ವಿಜಯ ವಿಠಲ ದೇವಸ್ಥಾನ, ಕಲ್ಲಿನ ರಥ, ಆನೆ ಸಾಲು ಮಂಟಪ ಸ್ಮಾರಕಗಳಿಗೆ ಅಲಂಕಾರ ಮಾಡಲಾಗಿದ್ದು ಎಲ್ಲರ ಗಮನ ಸೆಳೆಯುತ್ತಿವೆ.

ನೂರು ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿರುವ ಸವಿನೆನಪಿನಲ್ಲಿ ದೇಶದ ಆಯ್ದ ಪ್ರಮುಖ ಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಅದರಲ್ಲಿ ಹಂಪಿ ಸ್ಮಾರಕಗಳು ಸೇರಿವೆ. ಅ. 17ರ ವರೆಗೆ ದೀಪಾಲಂಕಾರ ಇರಲಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿ ಅನಿರುದ್ಧ ದೇಸಾಯಿ ತಿಳಿಸಿದ್ದಾರೆ.

ಸಾಲು ಸಾಲು ರಜೆ, ವಾರಾಂತ್ಯದಿಂದ ಹಂಪಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಬರುತ್ತಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿರುವ ಸ್ಮಾರಕಗಳನ್ನು ಕಣ್ತುಂಬಿಕೊಳ್ಖುವ ಅವಕಾಶ ಒಲಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT