ಭಾನುವಾರ, ಆಗಸ್ಟ್ 1, 2021
24 °C

ಹಂಪಿ ಸ್ಮಾರಕ ವೀಕ್ಷಣೆಗೆನಿರ್ಬಂಧ ಮುಂದುವರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ‘ದೇಶದಾದ್ಯಂತ ಇರುವ ಸ್ಮಾರಕಗಳು ಮತ್ತು ವಸ್ತು ಸಂಗ್ರಹಾಲಯಗಳನ್ನು ಬುಧವಾರದಿಂದ (ಜೂ. 16) ಪ್ರವಾಸಿಗರ ವೀಕ್ಷಣೆಗೆ ತೆರೆಯಬಹುದು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ತಿಳಿಸಿದೆ. ಆದರೆ, ಜಿಲ್ಲೆಯಲ್ಲಿ ಲಾಕ್‌ಡೌನ್‌ ಮುಂದುವರೆಸಿರುವುದರಿಂದ ಹಂಪಿ ಸ್ಮಾರಕಗಳ ವೀಕ್ಷಣೆ ಮೇಲಿನ ನಿರ್ಬಂಧ ಮುಂದುವರಿಯಲಿದೆ’ ಇಲಾಖೆಯ ಹಂಪಿ ವೃತ್ತದ ಡೆಪ್ಯುಟಿ ಸೂಪರಿಟೆಂಡೆಂಟ್‌ ಪಿ. ಕಾಳಿಮುತ್ತು ತಿಳಿಸಿದ್ದಾರೆ.

ಕೋವಿಡ್‌ ಸಂಖ್ಯೆ ವ್ಯಾಪಕವಾಗಿ ಹೆಚ್ಚಾಗುತ್ತಿರುವುದನ್ನು ಅರಿತು ಇಲಾಖೆಯು ಏ. 15ರಂದು ದೇಶದಾದ್ಯಂತ ಎಲ್ಲ ಸ್ಮಾರಕಗಳು ಮತ್ತು ವಸ್ತು ಸಂಗ್ರಹಾಲಯಗಳನ್ನು ಮುಚ್ಚುವಂತೆ ಆದೇಶಿಸಿತ್ತು. ಅದರ ಪ್ರಕಾರ, ಹಂಪಿ ಸ್ಮಾರಕಗಳಿಗೆ ಬಾಗಿಲು ಹಾಕಲಾಗಿತ್ತು. ಈಗ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಸ್ಥಳೀಯ ಆಡಳಿತಗಳ ಆದೇಶದ ಪ್ರಕಾರ, ಸ್ಮಾರಕಗಳ ಬಾಗಿಲು ತೆರೆಯಬಹುದು ಎಂದು ಇಲಾಖೆ ಆದೇಶಿಸಿದೆ. ಆದರೆ, ಜಿಲ್ಲೆಯಲ್ಲಿ ಜೂ. 21ರ ವರೆಗೆ ಲಾಕ್‌ಡೌನ್‌ ಇರುವುದರಿಂದ ಯಥಾಸ್ಥಿತಿ ಮುಂದುವರಿಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು