ಬುಧವಾರ, ಮಾರ್ಚ್ 29, 2023
30 °C

ಹಂಪಿ ಉತ್ಸವದ ಮಾಧ್ಯಮ ಕೇಂದ್ರ ಉದ್ಘಾಟಿಸಿದ ಸಚಿವೆ ಜೊಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಹಂಪಿ ಉತ್ಸವದ ಅಂಗವಾಗಿ ನಿರ್ಮಿಸಿರುವ ಮಾಧ್ಯಮ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ಅವರು ಹಂಪಿ ಗಾಯತ್ರಿ ಪೀಠದ ಮುಖ್ಯ ವೇದಿಕೆ ಬಳಿ ಶುಕ್ರವಾರ ಉದ್ಘಾಟಿಸಿದರು.

ವಿಜಯನಗರ ಜಿಲ್ಲೆಯಾಗಿ ಘೋಷಣೆಯಾದ ಬಳಿಕ ಪ್ರಥಮ ಬಾರಿಗೆ ಜರುಗಿತ್ತಿರುವ ಹಂಪಿ ಉತ್ಸವಕ್ಕೆ ಚಾಲನೆ ದೊರೆತಿದೆ. ಉತ್ಸವದ ಸಂಭ್ರಮವನ್ನು ನಾಡಿನ ಮೂಲೆ ಮೂಲೆಗೂ ಪಸರಿಸಲು ಮಾಧ್ಯಮಗಳು ಸಜ್ಜಾಗಿವೆ. ಇದಕ್ಕಾಗಿ ಗಾಯತ್ರಿ ಪೀಠದ ಬಳಿ ಮಾಧ್ಯಮ ಕೇಂದ್ರ ತೆರೆಯಲಾಗಿದೆ ಎಂದು ಸಚಿವೆ ಶಶಿಕಲಾ ಹೇಳಿದರು.

ಉತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನ, ಕೃಷಿ ಇಲಾಖೆಯ ಕೃಷಿ ಪರಿಕರಗಳ ಪ್ರದರ್ಶನ, ಜಲಕ್ರೀಡೆ, ಸಾಹಸ ಕ್ರೀಡೆ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್‌., ವಾರ್ತಾ ಇಲಾಖೆ ಉಪನಿರ್ದೆಶಕ ಕೆ.ರಾಮಲಿಂಗಪ್ಪ, ಹಿರಿಯ ಸಹಾಯಕ ನಿರ್ದೇಶಕ ಬಿ.ಧನಂಜಯಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.