ಹೊಸಪೇಟೆ (ವಿಜಯನಗರ): ಕನ್ನಡ ಕಾವ್ಯದ ತೊಟ್ಟಿಲು ಗ್ರಾಮೀಣ ಮಹಿಳೆಯರಾಗಿದ್ದು, ಅವರನ್ನು ಗೌರವಿಸುವ ಕೆಲಸ ನಾವು ಮಾಡಬೇಕಿದೆ. ಕಲ್ಲು ಕೊಟ್ಟವರಿಗೂ ಎಲ್ಲಾ ಭಾಗ್ಯವು ಬರಲಿ ಎಂದು ಹಾರೈಸಿದವರು ಇವರು. ಇದು ನಮ್ಮ ನಾಡಿನ ಹೆಣ್ಣು ಮಕ್ಕಳ ಉದಾತ್ತ ಚಿಂತನೆಗೆ ಸಾಕ್ಷಿ ಎಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿದರು.

ಅವರು ಶುಕ್ರವಾರ ಹಂಪಿ ಉತ್ಸವದ ಅಂಗವಾಗಿ ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

‘ಎಲ್ಲಾ ಮೂಢನಂಬಿಕೆಗಳನ್ನು ತುಳಿಯುವ ಶಕ್ತಿ ನಮ್ಮ ಕನ್ನಡ ಕಾವ್ಯಕ್ಕಿದೆ. ವರ್ತಮಾನದ ಕಾವ್ಯ ಹಾಗೂ ಚಿಂತನೆಗಳಲ್ಲಿ ಕಡು ಬಡುತನದ ಬಗ್ಗೆ ಯಾರೂ ಬರೆಯುತ್ತಿಲ್ಲ. ಕನ್ನಡ ಭಾಷೆಯ ಬಳಕೆ ಕಡಿಮೆಯಾಗಿದೆ. ಭಾಷೆ ಜೀವಂತವಾಗಿ ಇರಬೇಕಾದರೆ ಮಕ್ಕಳಿಗೆ ಹೆಚ್ಚಾಗಿ ಕನ್ನಡ ಭಾಷೆಯಲ್ಲಿ ಮಾತನಾಡುವ ವಾತಾವರಣ ಶಾಲೆಗಳಲ್ಲಿ ಕಲ್ಪಿಸಬೇಕಿದೆ’ ಎಂದು ಕುಂವೀ ಹೇಳಿದರು.

‘ಹೆಣ್ಣು ಇಲ್ಲದ ಕುಟುಂಬ ಅಪರಿಪೂರ್ಣ. ಹೆಣ್ಣುಗಿಂತ ದೊಡ್ಡದು ಯಾವುದೂ ಇಲ್ಲ. ಕುಟುಂಬದಲ್ಲಿ ಹೆಣ್ಣೇ ಕಣ್ಣು. ಹೆಣ್ಣುಮಕ್ಕಳು ಇದ್ದರೆ ತಂದೆ- ತಾಯಿಗಳನ್ನು ಅನಾಥಾಶ್ರಮಕ್ಕೆ ಸೇರಿಸುವುದಿಲ್ಲ. ಹೆಣ್ಣಿನದು ತಾಯಿ ಹೃದಯ. ಸ್ವಾತಂತ್ರ್ಯ ಪೂರ್ವದಲ್ಲಿ ಒಲ್ಲದ ಗಂಡನ ಜೊತೆಗೆ ಜೀವನ ಮಾಡಿದ ಮಹಿಳೆ, ಗಂಡ ಕೆಟ್ಟವನಾಗಿರಲಿ, ಕುಡುಕನಾಗಿರಲಿ ಎಲ್ಲವನ್ನೂ ಸಹಿಸಿಕೊಂಡು ಅವನ ಜೊತೆ ಕುಟುಂಬ ಮುನ್ನಡೆಸಿಕೊಂಡು ಹೋದಳು. ತಾಳ್ಮೆಯ ಸಹನೆ ನಮ್ಮ ಹೆಣ್ಣುಮಕ್ಕಳ ಗುಣವಾಗಿದೆ. ಈ ಮಹಿಳಾ ಕವಿಗೋಷ್ಠಿಯಲ್ಲಿ 42 ಕವಯತ್ರಿಯರ ಕವನಗಳನ್ನು ಕೇಳುತ್ತಿರುವುದು ಖುಷಿಯ ವಿಷಯ’ ಎಂದರು.

‘ನನ್ನ ಸಾಹಿತ್ಯ ಚಿಂತನೆ ಹಾಗೂ ಭಾಷೆಯ ಸೃಷ್ಟಿಗೆ ಬಳ್ಳಾರಿ ನೆಲ ಕಾರಣ. ನನ್ನ ಕಥೆ, ಕಾದಂಬರಿಗಳಲ್ಲಿ ಮಹಿಳಾ ಧ್ವನಿಗಳನ್ನು ಸಶಕ್ತವಾಗಿ ಅಭಿವ್ಯಕ್ತಿಸಿದ್ದೇನೆ. ಸ್ತ್ರೀತನ ಇಲ್ಲದಿದ್ದರೆ ಒಳ್ಳೆಯ ಲೇಖಕನಾಗಲು ಸಾಧ್ಯವಿಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಮಾತನಾಡಿ, ಹಂಪಿ ಉತ್ಸವದಲ್ಲಿ ಹಿಂದಿನ ವರ್ಷದಿಂದ ಕವಿಗೋಷ್ಠಿಯನ್ನು ಪ್ರಾರಂಭಿಸಿದ್ದೇವೆ. ಮಹಿಳಾ ಕವಿಗೋಷ್ಠಿಯಲ್ಲಿ ಅವರ ಚಿಂತನೆಗಳು ಹೊರ ಬರಬೇಕು. ಮಹಿಳೆಯರು ತಮ್ಮ ವಿಚಾರ ವಿನಿಮಯಗಳನ್ನು ಹೊರ ಹಾಕಲು ಇದೊಂದು ಒಳ್ಳೆಯ ವೇದಿಕೆಯಾಗಿದೆ ಎಂದರು.

ವಿಮರ್ಶಕರಾದ ಡಾ.ಸೋಮಕ್ಕ ಎಂ. ಮಾತನಾಡಿ, ಶತ- ಶತಮಾನಗಳಿಂದ ಮಹಿಳೆಯರು ಅವಕಾಶ ವಂಚಿತರಾಗಿದ್ದರು. ಬುದ್ದ. ಬಸವ. ಅಂಬೇಡ್ಕರ್ ಚಿಂತನೆಗಳಿಂದ ಮಹಿಳೆಯರ ಪರವಾದ ನೀತಿ ನಿಯಮಗಳು ಇಂದು ಜಾರಿಯಾಗಿವೆ. ಅವರಿಗೆ ತಮ್ಮ ಎಲ್ಲಾ ವಿಚಾರ ವಿನಿಮಯ ಅಭಿವ್ಯಕ್ತಪಡಿಸುವ ಅವಕಾಶ ಸಿಕ್ಕಿದೆ. ಶಿವರಾತ್ರಿ ದಿನ ಜನರು ಸಾಲು - ಸಾಲಾಗಿ ದೇವಾಲಯಗಳ ಮುಂದೆ ಸರದಿ ನಿಂತಿದ್ದರು. ಆದರೆ ದೇವಾಲಯದ ಮುಂದೆ ನಿಲ್ಲುವ ಸರದಿಗಿಂತ ಗ್ರಂಥಾಲಯದ ಮುಂದೆ ನಿಂತರೆ ನಮ್ಮ ಬದುಕು ಅರ್ಥಪೂರ್ಣವಾಗುತ್ತದೆ’ ಎಂದರು.

‘ಸಮಾಜದಲ್ಲಿ ಬಹುತೇಕ ಮಹಿಳೆಯರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನಮಗೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಾದರೂ ಹೆಣ್ಣಿನ ಮೇಲೆ ಇನ್ನೂ ಶೋಷಣೆ, ದೌರ್ಜನ್ಯ ನಡೆಯುತ್ತಿದೆ. ಇದರ ವಿರುದ್ಧ ಮಹಿಳೆಯರು ಧ್ವನಿ ಎತ್ತಬೇಕಿದೆ. ಹೆಣ್ಣು- ಗಂಡು ಚಹರೆ ಮೂಲಕ ಗುರುತಿಸಬಹುದು, ಆದರೆ ಮಾನಸಿಕವಾಗಿ ಅಲ್ಲ. ವಿದೇಶದಲ್ಲಿ ಮಹಿಳೆಯರು ತುಂಡು ಬಟ್ಟೆ ತೊಟ್ಟರೂ ಅವರ ಮೇಲೆ ದೌರ್ಜನ್ಯ ನಡೆಯುವುದಿಲ್ಲ, ನಮ್ಮ ದೇಶದಲ್ಲಿ ಮಹಿಳೆ ಮೈ ತುಂಬ ಬಟ್ಟೆ ಉಟ್ಟರೂ ಅವಳ ಮೇಲೆ ದೌರ್ಜನ್ಯಗಳು ನಡೆಯುತ್ತದೆ, ಅವಳನ್ನು ನೋಡುವ ದೃಷ್ಟಿ ನಮ್ಮ ಸಮಾಜದ್ದು ಬದಲಾಗಬೇಕಿದೆ’ ಎಂದು ಹೇಳಿದರು.

ಅಂಕಣ ಬರಹಗಾರರಾದ ಶ್ರೀದೇವಿ ಕೆರೆಮನೆ ಅಧ್ಯಕ್ಷತೆ ವಹಿಸಿದ್ದರು. ಅಖಂಡ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ನಿಷ್ಠಿ ರುದ್ರಪ್ಪ. ತಾಲ್ಲೂಕು ಘಟಕದ ಅಧ್ಯಕ್ಷ ಗುಂಡಿ ಮಾರುತಿ, ಸಾಹಿತಿ ದಯಾನಂದ ಕಿನ್ನಾಳ. ಶಾಲಾ- ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕರಾದ ವೆಂಕಟೇಶ್ ರಾಮಚಂದ್ರಪ್ಪ. ಪ್ರಾಚಾರ್ಯ ನಾಗರಾಜ್ ಹವಾಲ್ದಾರ್. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ವೇತಾ, ಸಿಂಧು. ಸುಭದ್ರಾ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.