ಹರಪನಹಳ್ಳಿ: ನಗರದ ಕ್ರೀಡಾಂಗಣದ ಪಕ್ಕದಲ್ಲಿರುವ ಐತಿಹಾಸಿಕ ‘ಅಯ್ಯನಕೆರೆ ಸ್ವಚ್ಛತಾ’ ಕಾರ್ಯಕ್ಕೆ ನಗರಸಭೆ ಮಂಗಳವಾರ ಚಾಲನೆ ನೀಡಿದೆ.

ಬೇಸಿಗೆಯ ಕಾರಣ ಕೆರೆಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಘನತ್ಯಾಜ್ಯ ತೆರವು ಕಾರ್ಯಾಚರಣೆ ಆರಂಭವಾಗಿದ್ದು, 27 ಹೆಕ್ಟೇರ್ ಪ್ರದೇಶ ಹೊಂದಿದ ಕೆರೆಯ ಸ್ವಚ್ಛತೆಗೆ 30ಕ್ಕೂ ಹೆಚ್ಚು ಪೌರ ಕಾರ್ಮಿಕರನ್ನು ನಿಯೋಜಿಸಲಾಗಿದೆ.

‘ನಗರದ ಚರಂಡಿ ನೀರು ಕೆರೆಗೆ ಸಂಗ್ರಹವಾಗುವ ಕಾರಣ ಕೆರೆ ನೀರು ಮಲಿನವಾಗಿದೆ. ಸಾರ್ವಜನಿಕರು ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯ ವಸ್ತುಗಳನ್ನು ಕೆರೆಗೆ ಎಸೆಯುವ ಕಾರಣ ಕೆರೆಯಲ್ಲಿ ಹೂಳು ತುಂಬಿಕೊಂಡಿದೆ. ಕೆರೆಯಲ್ಲಿ ನೀರಿನ ಮಟ್ಟ ಇದೀಗ ಕಡಿಮೆಯಿದ್ದು, ಘನತ್ಯಾಜ್ಯ ವಿಲೇವಾರಿ ಕೆಲಸ ಆರಂಭಿಸಲಾಗಿದೆ’ ಎಂದು ಪೌರಾಯುಕ್ತೆ ರೇಣುಕಾ ಎಸ್. ದೇಸಾಯಿ ತಿಳಿಸಿದರು.

ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು. ಎಂಜಿನಿಯರ್ ಅಮರೇಶ್, ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ, ಎಂ.ವಿ. ಅಂಜಿನಪ್ಪ, ಲಾಠಿ ದಾದಾಪೀರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-25-1528575110

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.