ಹರಪನಹಳ್ಳಿ: ರಸ್ತೆಯಲ್ಲಿ ಬೈಕ್ ಚಲಾಯಿಸುವಾಗ ಹೆಲ್ಮೆಟ್ ಧರಿಸುವುದು ಕೇವಲ ನಿಯಮವಲ್ಲ, ಅದು ನಿಮ್ಮ ಪ್ರಾಣ ಕಾಯುವ ರಕ್ಷಾ ಕವಚ ಎಂದು ಸರ್ಕಲ್ ಇನ್ಸ್ಪೆಕ್ಟರ್ ಮಹಾಂತೇಶ್ ಜಿ. ಸಜ್ಜನ್ ಬೈಕ್ ಸವಾರರಿಗೆ ಕಿವಿಮಾತು ಹೇಳಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್ ಆವರಣದಲ್ಲಿ ಪೊಲೀಸ್ ಇಲಾಖೆಯು ಈಚೆಗೆ ಹಮ್ಮಿಕೊಂಡಿದ್ದ 'ಕಡ್ಡಾಯ ಹೆಲ್ಮೆಟ್ ಧರಿಸುವ ಜಾಗೃತಿ ಅಭಿಯಾನ'ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಬೈಕ್ ಅಪಘಾತಗಳಾದಾಗ ತಲೆಗೆ ಬಲವಾದ ಪೆಟ್ಟು ಬಿದ್ದು, ಸವಾರರು ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ, ಅಪಘಾತವಾಗಿ ಪ್ರಾಣಹಾನಿಯಾದರೆ ಇಡೀ ಕುಟುಂಬ ಬೀದಿಗೆ ಬೀಳುತ್ತದೆ. ಬೈಕ್ ಸವಾರರು ಕಡ್ಡಾಯವಾಗಿ ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸಬೇಕು ಎಂದು ಸಲಹೆ ನೀಡಿದರು.

ರಸ್ತೆ ನಿಯಮಗಳನ್ನು ಗಾಳಿಗೆ ತೂರಿದರೆ ಇನ್ಮುಂದೆ ಪೊಲೀಸ್ ಇಲಾಖೆಯಿಂದ ಯಾವುದೇ ಮುಲಾಜಿಲ್ಲದೆ ಕಠಿಣ ದಂಡ ವಿಧಿಸಲಾಗುವುದು. 18 ವರ್ಷ ತುಂಬದ ಮಕ್ಕಳಿಗೆ ಗಾಡಿ ನೀಡಬೇಡಿ. ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಮಕ್ಕಳು ಸಿಕ್ಕಿಬಿದ್ದರೆ, ಪೋಷಕರೇ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾರ್ಯಕ್ರಮದ ಬಳಿಕ ಪಟ್ಟಣದ ಶಿವಮೊಗ್ಗ-ಹೊಸಪೇಟೆ ಮುಖ್ಯ ರಸ್ತೆಯಲ್ಲಿ ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದ ಬೈಕ್ ಸವಾರರನ್ನು ತಡೆದ ಪೊಲೀಸರು, ಅವರಿಗೆ ಪ್ರೀತಿಯಿಂದಲೇ ತಿಳಿಹೇಳಿ ಅರಿವು ಮೂಡಿಸಿದರು. ಅಪರಾಧ ವಿಭಾಗದ ಪಿಎಸ್ಐ ಮೀನಾಕ್ಷಿ ಪೊಲೀಸ್ ಇಲಾಖೆಯ ಮಂಜಪ್ಪ, ಅಂಜಿನಪ್ಪ, ಕೊಟ್ರೇಶ್, ಅಂಬರೀಶ್, ನಾಗರಾಜ್, ವೀರೇಂದ್ರ, ಕಾರ್ಮಿಕ ಮುಖಂಡ ಗುಡಿಹಳ್ಳಿ ಹಾಲೇಶ್, ನಂದಿಬೇವೂರು ಮುನಿಯಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-25-984949030

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.