ಹರಪನಹಳ್ಳಿ: ಪಟ್ಟಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಅವರನ್ನು ಸನ್ಮಾನಿಸಿಲು ಅವಕಾಶ ಸಿಗದೆ ಕಾಂಗ್ರೆಸ್ ಕಾರ್ಯಕರ್ತರು ತಾವು ತಂದಿದ್ದ ಶಾಲು, ಮಾಲೆ, ಪೇಟ ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಕೆಲವರು ಪೊಲೀಸರ ಜೊತೆ ವಾಗ್ವಾದ ನಡೆಸಿದರು.

ನಿಂಗಪ್ಪ, ಗೋಣೆಪ್ಪ ಎಂಬುವರು ಮುಖ್ಯಮಂತ್ರಿಗೆ ತಲಾ ಒಂದೊಂದು ಕುರಿಮರಿಗಳನ್ನು ನೀಡಿದರು. ತಮಗೆ ಸ್ವಂತ ಮನೆಯಿಲ್ಲ. ಸೂರಿನ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ವಿವಿಧ ಸೌಲಭ್ಯ ಕೋರಿ ಮನವಿ ಸಲ್ಲಿಕೆ: ಅಲೆಮಾರಿ, ಅರೆ ಅಲೆಮಾರಿಗಳಿಗೆ ಶೇ 1ರಷ್ಟು ಪ್ರತ್ಯೇಕ ಒಳಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಎಸ್ಸಿ, ಎಸ್ಟಿ ಬುಡಕಟ್ಟು ಮಹಾಸಭಾದಿಂದ, ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕೆಂದು ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರಿಂದ, ಅರಸೀಕೆರೆ, ಉಚ್ಚಂಗಿದುರ್ಗ ಗ್ರಾಮಗಳಲ್ಲಿ ಮೂಲಸೌಕರ್ಯ ಕಲ್ಪಿಸಬೇಕು. ಹೊಸಕೋಟೆ ಸಹಕಾರ ಸಂಘದಲ್ಲಿ ನಡೆದಿರುವ ಅವ್ಯವಹಾರ ಸಮಗ್ರ ತನಿಖೆಗೆ ಒಳಪಡಿಸಬೇ

ಕೆಂದು ಅಖಿಲ ಭಾರತ ಕಿಸಾನ್ ಸಭಾದಿಂದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ವಿವಿಧ ಸಂಘಟನೆಗಳ ಪದಾಧಿಕಾರಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.