ಹರಪನಹಳ್ಳಿ: ನಗರದ ಇತಿಹಾಸ ಪ್ರಸಿದ್ಧ ಕೋಟೆ ಆಂಜನೇಯ ಸ್ವಾಮಿಯ ನೂತನ ರಥ ಗುರುವಾರ ಸಂಜೆ ಲೋಕಾರ್ಪಣೆಗೊಂಡಿತು. ಹುಣ್ಣಿಮೆ ದಿನ ಭಕ್ತರು ಭಕ್ತರು ಎಳೆಯುವ ಮೂಲಕ ರಥೋತ್ಸವ ಆಚರಿಸಿದರು.

ಅಲಂಕೃತ ಪಲ್ಲಕ್ಕಿಯಲ್ಲಿ ಸ್ವಾಮಿ ಪ್ರತಿಷ್ಠಾಪಿಸಿ ನೂತನ ರಥದ ಬಳಿ ಮೆರವಣಿಗೆ ಮೂಲಕ ಕರೆತರಲಾಯಿತು. ಮೂರು ಸುತ್ತು ಪ್ರದಕ್ಷಿಣೆ ಹಾಕಿದ ಬಳಿಕ ನಡೆದ ಹರಾಜಿನಲ್ಲಿ ಸ್ವಾಮಿ ಧ್ವಜವನ್ನು ಭಕ್ತರಾದ ರೂಪ ಅವರು ₹1.70 ಲಕ್ಷಕ್ಕೆ ಪಡೆದುಕೊಂಡರು. ಭಕ್ತರು ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿ ಸಲ್ಲಿಸಿದರು. ಧರ್ಮಕರ್ತ ಡಾ.ಹರ್ಷ ಕಟ್ಟಿ, ಅರ್ಚಕರು ಹಾಗೂ ಆಂಜನೇಯ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಇದ್ದರು.

ತಾಲ್ಲೂಕಿನ ನೀಲಗುಂದ ಗ್ರಾಮದಲ್ಲಿ ವೀರಭದ್ರೇಶ್ವರ ಸ್ವಾಮಿ ಮತ್ತು ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಜೋಡಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿದವು. ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಗ್ರಾಮದ ಮುಖಂಡರು ಹಾಗೂ ಭಕ್ತರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-25-1738543192

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.