ಹರಪನಹಳ್ಳಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಲಹೀನಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಮಸೂದೆಯನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಸಿಪಿಐ(ಎಂಎಲ್) ಲಿಬರೇಷನ್ ಹಾಗೂ ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಗರದ ತಾಲ್ಲೂಕು ಆಡಳಿತಸೌಧದ ಬಳಿ ಜಮಾಯಿಸಿದ ಕಾರ್ಮಿಕರು ಹಾಗೂ ಸಂಘಟನೆಯ ಮುಖಂಡರು, ತಹಶೀಲ್ದಾರ್ ಕಚೇರಿಗೆ ತೆರಳಿ ಅಧಿಕಾರಿಗೆ ಮನವಿ ಸಲ್ಲಿಸಿದರು. ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐ(ಎಂಎಲ್) ಲಿಬರೇಷನ್ ರಾಜ್ಯ ಘಟಕದ ಕಾರ್ಯದರ್ಶಿ ಎಸ್. ಪರಶುರಾಮ ಮಾತನಾಡಿ, ‘ಬಡವರಿಗೆ ಆಸರೆಯಾಗಿದ್ದ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರವು ಬದಲಾಯಿಸಿ, ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ–2025 ಅನ್ನು ಜಾರಿಗೆ ತಂದಿದೆ. ಸಂಸತ್ತಿನಲ್ಲಿ ಅಂಗೀಕಾರ ಆಗಿರುವ ಈ ಮಸೂದೆಯು ದೇಶದ ಬಡ ಮತ್ತು ಮಧ್ಯಮ ವರ್ಗದ ಜನರ ಉದ್ಯೋಗದ ಹಕ್ಕನ್ನು ಕಸಿದುಕೊಂಡಿದೆ’ ಎಂದು ಆರೋಪಿಸಿದರು.

‘ಮಹಾತ್ಮ ಗಾಂಧೀಜಿ ಹೆಸರು ಕೈಬಿಡದೆ, ಹಳೆಯ ಹೆಸರಿನಲ್ಲಿಯೇ ಯೋಜನೆಯನ್ನು ಯಥಾವತ್ತಾಗಿ ಮುಂದುವರಿಸಬೇಕು. 2025–26ನೇ ಸಾಲಿನಲ್ಲಿ ಈ ಯೋಜನೆಗೆ ₹86,000 ಕೋಟಿ ಮೀಸಲಿಡಲಾಗಿತ್ತು. 2026–27ನೇ ಸಾಲಿನ ಬಜೆಟ್ನಲ್ಲಿ ಈ ಮೊತ್ತವನ್ನು ಕನಿಷ್ಠ ₹2 ಲಕ್ಷ ಕೋಟಿಗೆ ಹೆಚ್ಚಿಸಬೇಕು’ ಎಂದು ಒತ್ತಾಯಿಸಿದರು.

ಹುಲಿಕಟ್ಟಿ ಮೈಲಪ್ಪ, ಮಂಗಳಮ್ಮ, ಸಂದೇರ ಪರಶುರಾಮ, ನಾರಾಯಣಪುರ ಅಂಜಿನಮ್ಮ, ಸುಧಾ, ರಫಿ, ಮೋಹನ್ ಕುಮಾರ, ಅಂಜಿನಮ್ಮ, ತಿಲಕ್ ಕುಮಾರ, ಪ್ರವೀಣ್ ಸವಿತಾ ಯಶೋದಮ್ಮ, ಗೀತಮ್ಮ, ಈರಮ್ಮ, ರೇಣುಕಮ್ಮ, ಹನುಮಕ್ಕ, ಸಣ್ಣ ಕರಿಬಸಪ್ಪ, ಶೇಖಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-25-1043313008

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.