ಹರಪನಹಳ್ಳಿ: ಬೇಸಿಗೆಯ ತೀವ್ರ ಬಿಸಿಲಿನಿಂದ ಬಳಲುತ್ತಿರುವ ಸಾರ್ವಜನಿಕರ ದಾಹ ತೀರಿಸಲು ಇಲ್ಲಿನ ಪತಂಜಲಿ ಯೋಗ ಸಮಿತಿ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಉಚಿತ ಮಜ್ಜಿಗೆ ವಿತರಿಸಲಾಯಿತು. ಗ್ರಾಮೀಣ ಭಾಗದ ಜನರು, ವಿದ್ಯಾರ್ಥಿಗಳು, ವ್ಯಾಪಾರಿಗಳು ಹಾಗೂ ಪ್ರಯಾಣಿಕರು ಸೇರಿದಂತೆ 500ಕ್ಕೂ ಅಧಿಕ ಮಂದಿ ತಂಪಾದ ಮಜ್ಜಿಗೆ ಸವಿದರು.

ಈ ವೇಳೆ ಮಾತನಾಡಿದ ಸಮಿತಿಯ ಅಧ್ಯಕ್ಷ ಎಚ್.ಮಲ್ಲಿಕಾರ್ಜುನ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ಸಮಾಜ ಮುಖಿ ಸೇವಾ ಕಾರ್ಯಗಳನ್ನು ಮುಂದೆಯೂ ನಿರಂತರವಾಗಿ ನಡೆಸ ಲಾಗುವುದು ಎಂದು ತಿಳಿಸಿದರು.

ಉಪಾಧ್ಯಕ್ಷ ಬಿ.ಸುದರ್ಶನ್, ಕಾರ್ಯದರ್ಶಿ ಕೆ.ಅರವಿಂದ್ ಶೆಟ್ಟಿ, ಖಜಾಂಚಿ ಡಾ.ವಿನಯ್ ಬೇಂದ್ರೆ, ಡಾ.ಎ.ಸಂತೋಷ್ ಹಾಗೂ ಸಮಿತಿಯ ಇತರ ಸದಸ್ಯರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-25-981593090

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.