ಹರಪನಹಳ್ಳಿ: ಇಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿರುವ ಸರ್ಕಾರಿ ಬೆಂಬಲ ಬೆಲೆಯ ರಾಗಿ ಖರೀದಿ ಕೇಂದ್ರದಲ್ಲಿ ರೈತರಿಂದ ಪ್ರತಿ ಕ್ವಿಂಟಲ್ಗೆ 3 ಕೆ.ಜಿ. ಹೆಚ್ಚುವರಿ ರಾಗಿ ಪಡೆಯಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಗ್ರಾಮಗಳ ರೈತರು ತಹಶೀಲ್ದಾರ್ ಬಿ.ವಿ. ಗಿರೀಶ್ ಬಾಬು ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

‘ರಾಗಿ ಖರೀದಿಯ ಗುತ್ತಿಗೆ ಪಡೆದಿರುವ ಖಾಸಗಿ ಏಜೆನ್ಸಿಯವರು ಅಕ್ರಮವಾಗಿ ತೂಕ ಮಾಡುತ್ತಿದ್ದಾರೆ. ಇದನ್ನು ಪ್ರಶ್ನಿಸಿದರೆ ಉದ್ಧಟತನದಿಂದ ವರ್ತಿಸುತ್ತಿದ್ದಾರೆ’ ಎಂದು ರೈತ ಮುಖಂಡ ಎಚ್. ಹನುಮಂತಪ್ಪ ಆರೋಪಿಸಿದರು.

ಅಕ್ರಮದಲ್ಲಿ ತೊಡಗಿರುವ ಏಜೆನ್ಸಿಯ ಪರವಾನಗಿ ಕೂಡಲೇ ರದ್ದುಪಡಿಸಿ ಕಾನೂನು ಕ್ರಮ ಜರುಗಿಸಬೇಕು. ಇದುವರೆಗೆ ರೈತರಿಂದ ಹೆಚ್ಚುವರಿಯಾಗಿ ಪಡೆದ ರಾಗಿಗೆ ತಕ್ಕ ಮೊತ್ತ ನೀಡಬೇಕು. ತೂಕದ ಅಕ್ರಮ ತಡೆಗೆ ಕೇಂದ್ರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರೈತರಾದ ಹನುಮಂತಪ್ಪ, ಮಹಾಂತೇಶ ನೀಲಗುಂದ, ಕೆಂಚಪ್ಪ, ಅಂಜಿನಪ್ಪ, ಕೋಡಿಹಳ್ಳಿ ಮಲ್ಲಿಕಾರ್ಜುನ, ಕನ್ನವಳ್ಳಿ ಸುರೇಶ, ಪ್ರಭು ಶೃಂಗಾರತೋಟ, ಗಂಗಾನಾಯ್ಕ, ಕಾಳ್ಯನಾಯ್ಕ, ಮಹಮ್ಮದ್ ರಫಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-25-487214502

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.