ಹರಪನಹಳ್ಳಿ: ಗೃಹಬಳಕೆಯ ಸಿಲಿಂಡರ್ಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ದೂರಿನ ಹಿನ್ನೆಲೆಯಲ್ಲಿ ತಹಶೀಲ್ದಾರ್ ಬಿ.ವಿ. ಗಿರೀಶ್ ಬಾಬು ಅವರು ಶುಕ್ರವಾರ ನಗರದ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ, ದಾಖಲೆ ಪರಿಶೀಲಿಸಿದರು.

‘ಗ್ರಾಮೀಣ ಭಾಗದ ಸಬ್ ಏಜೆನ್ಸಿಗಳಿಗೆ ಎರಡ್ಮೂರು ತಿಂಗಳಿಂದ ಅಡುಗೆ ಅನಿಲದ ಸಿಲಿಂಡರ್ಗಳನ್ನು ಪೂರೈಕೆ ಮಾಡದ ಕಾರಣ ಗ್ರಾಹಕರು ನಗರಕ್ಕೆ ಬಂದು ಅಲೆದಾಡುವಂತಾಗಿದೆ. ಹಳ್ಳಿಗಳಲ್ಲಿರುವ ಗ್ರಾಹಕರ ಪಾಲಿನ ಸಿಲಿಂಡರ್ಗಳನ್ನು ಅಕ್ರಮವಾಗಿ ಡಿಎಸ್ಸಿ ನಂಬರ್ ಬಳಸಿ, ಬೀದಿಬದಿ ವ್ಯಾಪಾರಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಸಿಲಿಂಡರ್ ಪಡೆಯಲು ಬರುವ ಗ್ರಾಮೀಣ ವಿತರಕರೊಂದಿಗೆ, ಏಜೆನ್ಸಿ ಸಿಬ್ಬಂದಿ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆಯೂ ದೂರುಗಳು ಬಂದಿವೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ತಹಶೀಲ್ದಾರ್ ಬಿ.ವಿ. ಗಿರೀಶ ಬಾಬು ಮಾತನಾಡಿ, ‘ಗ್ರಾಮೀಣ ಜನರಿಗೆ ತೊಂದರೆಯಾಗದಂತೆ ಸಬ್ ಏಜೆನ್ಸಿಗಳಿಗೆ ಸಮರ್ಪಕವಾಗಿ ಸಿಲಿಂಡರ್ ವಿತರಿಸಬೇಕು. ಕೃತಕ ಅಭಾವ ಸೃಷ್ಟಿಸಿ, ಹೆಚ್ಚಿನ ಹಣ ವಸೂಲಿ ಮಾಡಿದರೆ ಏಜೆನ್ಸಿ ಮಾಲೀಕರು, ವ್ಯವಸ್ಥಾಪಕರು ಹಾಗೂ ವಿತರಕರನ್ನೇ ನೇರ ಹೊಣೆಗಾರರನ್ನಾಗಿಸಲಾಗುತ್ತದೆ. ಎಲ್ಪಿಜಿ ಆದೇಶ 2000ರನ್ವಯ ಕಠಿಣ ಕ್ರಮ ಜರುಗಿಸಲಾಗುತ್ತದೆ’ ಎಂದು ಎಚ್ಚರಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಶಿರಸ್ತೇದಾರ್ ಭರತ್ ರಾಜ್ ಸಿ. ಹಾಗೂ ಗ್ಯಾಸ್ ಏಜೆನ್ಸಿಯ ಕೃಷ್ಣಂ ರಾಜ ರೆಡ್ಡಿ, ಶಂಭಣ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-25-602251382

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.