ಹರಪನಹಳ್ಳಿ: ತಾಲ್ಲೂಕಿನ ಕಡೆಕಲ್ಲು ತಾಂಡಾ ಸಮೀಪದ ಉಚ್ಚಂಗಿದುರ್ಗ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ದಶಕಗಳಿಂದ ನಡೆಯುತ್ತಿದ್ದ ಅಕ್ರಮ ಸಾಗುವಳಿ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ತೆರವುಗೊಳಿಸಿದರು.

ಪೊಲೀಸ್ ಇಲಾಖೆಯ ಬಿಗಿ ಬಂದೋಬಸ್ತ್ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸುಮಾರು 50 ಎಕರೆ ಅರಣ್ಯ ಭೂಮಿಯನ್ನು ಇಲಾಖೆ ವಶಕ್ಕೆ ಪಡೆದಿದೆ.

ವಲಯ ಅರಣ್ಯಾಧಿಕಾರಿ ರಾಜು ಗೋವಂದ್ಕರ್ ಮಾತನಾಡಿ, ‘ಕಂಚಿಕೆರೆ ಮತ್ತು ಉಚ್ಚಂಗಿದುರ್ಗ ಸರ್ವೆ ನಂಬರ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸ್ಥಳೀಯರು ಹಲವು ವರ್ಷಗಳಿಂದ ಅತಿಕ್ರಮಣ ಮಾಡಿ ಸಾಗುವಳಿ ಮಾಡುತ್ತಿದ್ದರು. ಇದೀಗ ಅರಣ್ಯ ಇಲಾಖೆ ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಒತ್ತುವರಿ ತೆರವು ಕಾರ್ಯ ನಡೆಸಲಾಗಿದೆ’ ಎಂದು ತಿಳಿಸಿದರು.

ತೆರವು ಕಾರ್ಯಾಚರಣೆಯಲ್ಲಿ ಸಿಪಿಐ ಮಹಾಂತೇಶ್ ಸಜ್ಜನ್, ಅರಸೀಕೆರೆ ಪಿಎಸ್ಐ ವಿಜಯಕೃಷ್ಣ, ಅರಣ್ಯ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-25-442760930

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.