₹225 ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆ ಕಾಮಗಾರಿ ಶೇ 99ರಷ್ಟು ಮುಕ್ತಾಯವಾಗಿದೆ. ಅರಣ್ಯ ಇಲಾಖೆ ಅನುಮತಿ ಒಪ್ಪಿಗೆ ಪಡೆದು 105 ಗ್ರಾಮಗಳಿಗೆ ನೀರು ಸರಬರಾಜು ಆಗುತ್ತದೆ
ಎಂ.ಪಿ.ಲತಾ ಮಲ್ಲಿಕಾರ್ಜುನ, ಶಾಸಕರು, ಹರಪನಹಳ್ಳಿ
ಕುಡಿಯುವ ನೀರು ತೊಂದರೆ ಆಗದಂತೆ ಮುಂಜಾಗ್ರತೆ ವಹಿಸಲು ಕಾರ್ಯಪಡೆ ಸಮಿತಿ ಸಭೆಯಲ್ಲಿ ಪಿಡಿಒಗಳಿಗೆ ಸೂಚಿಸಲಾಗಿದೆ. 17 ಹಳ್ಳಿಗಳಲ್ಲಿ ಖಾಸಗಿ ಕೊಳವೆಬಾವಿ ಬಾಡಿಗೆ ಪಡೆದು ನೀರು ಪೂರೈಸುತ್ತಿದ್ದಾರೆ
ವೈ.ಎಚ್.ಚಂದ್ರಶೇಖರ, ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯಿತಿ
ತಾಲ್ಲೂಕಿನ ಅರಸಿಕೆರೆ ಹೋಬಳಿಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ. ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕಾಗಿದೆ. ನೀರಿಗಾಗಿ ಶಾಶ್ವತ ಪರಿಹಾರ ಕಲ್ಪಿಸಬೇಕು
ಡಿ.ಎಚ್.ಅರುಣ್, ಕೆರೆಗುಡಿಹಳ್ಳಿ
ನಗರದ ಆಶ್ರಯ ಕಾಲೋನಿ, ಶಿಕ್ಷಕರ ಬಡಾವಣೆ, ತರಳಬಾಳು ಕಲ್ಯಾಣ ಮಂಟಪದ ಸುತ್ತಮುತ್ತ ಈವರೆಗೂ ತುಂಗಭದ್ರಾ ನದಿ ನೀರು ಪೂರೈಕೆಯಿಲ್ಲ. ಓವರ್ ಹೆಡ್ ಟ್ಯಾಂಕ್ ನಿರ್ಮಿಸಿದರೂ ಪ್ರಯೋಜನವಾಗಿಲ್ಲ