ಶನಿವಾರ, ಅಕ್ಟೋಬರ್ 16, 2021
22 °C

ಹರ್ಷಲ್‌ ಭೊಯರ್‌ ವಿಜಯನಗರ ಜಿಲ್ಲಾ ಪಂಚಾಯಿತಿ ನೂತನ ಸಿಇಒ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಹರ್ಷಲ್ ಭೊಯರ್ ನಾರಾಯಣ ರಾವ್ ಅವರನ್ನು ವಿಜಯನಗರ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ರಾಜ್ಯ ಸರ್ಕಾರ ಸೋಮವಾರ ನೇಮಕ ಮಾಡಿದೆ.

ಹರ್ಷಲ್‌ ಅವರು ಚಾಮರಾಜನಗರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದರು. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಜಯನಗರ ಜಿಲ್ಲೆಗೆ ಸಿಇಒ ಆಗಿ ನೇಮಿಸಲಾಗಿದೆ. ಹರ್ಷಲ್‌ ಅವರು ಚಾಮರಾಜನಗರದಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು ಅತ್ಯುತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಿ ಹೆಸರು ಮಾಡಿದ್ದಾರೆ.

ರಾಜ್ಯ ಸರ್ಕಾರವು ಅಕ್ಟೋಬರ್‌ 1ರಂದು ಕೆ.ಎಂ. ಗಾಯತ್ರಿ ಅವರನ್ನು ವಿಜಯನಗರ ಜಿಲ್ಲಾ ಪಂಚಾಯಿತಿ ಸಿಇಒ ಆಗ ನೇಮಕ ಮಾಡಿತ್ತು. ಆದರೆ, ಅವರು ಅಧಿಕಾರ ಸ್ವೀಕರಿಸುವುದಕ್ಕೂ ಮುನ್ನವೇ ಅವರ ವರ್ಗಾವಣೆ ಆದೇಶ ರದ್ದುಗೊಳಿಸಿ, ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಿತ್ತು. ಈಗ ಹರ್ಷಲ್‌ ಅವರನ್ನು ನೇಮಿಸಿ, ಅನಿರುದ್ಧ್‌ ಅವರನ್ನು ಹೆಚ್ಚುವರಿ ಹೊಣೆಯಿಂದ ಬಿಡುಗಡೆಗೊಳಿಸಿದೆ.
ಇದರೊಂದಿಗೆ ನೂತನ ವಿಜಯನಗರ ಜಿಲ್ಲೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ನೇಮಕಗೊಂಡಂತಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು