ಹೂವಿನಹಡಗಲಿ: ತಾಲ್ಲೂಕಿನ ನಂದಿಹಳ್ಳಿ ಸಂಪರ್ಕ ರಸ್ತೆ ಸಂಪೂರ್ಣ ಹಾಳಾಗಿದ್ದು, ಸಂಬಂಧಿಸಿದವರು ತಿಂಗಳೊಳಗೆ ದುರಸ್ತಿಗೆ ಕ್ರಮ ವಹಿಸದಿದ್ದರೆ ರಸ್ತೆ ತಡೆ ಚಳವಳಿ ಹಮ್ಮಿಕೊಂಡು ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ನಂದಿಹಳ್ಳಿ ರಸ್ತೆ ಹಾಳಾಗಿ ನಾಲ್ಕೈದು ವರ್ಷಗಳು ಕಳೆದಿವೆ. ರಸ್ತೆಯ ಡಾಂಬರ್ ಪದರು ಕಿತ್ತು ಜಲ್ಲಿ ಕಲ್ಲುಗಳು ಹರಡಿವೆ. ಕೆಲ ಬೈಕ್ ಸವಾರರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಗುಂಡಿ ಬಿದ್ದಿರುವ ರಸ್ತೆಯಲ್ಲಿ ಕೆಎಸ್ಆರ್ಟಿಸಿಯವರು ಬಸ್ ಓಡಿಸಲು ಹಿಂದೇಟು ಹಾಕುತ್ತಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ನಿತ್ಯ ತಾಲ್ಲೂಕು ಕೇಂದ್ರಕ್ಕೆ ಬಂದು ಹೋಗುವ ನಾಗರಿಕರು ಪರದಾಡುವಂತಾಗಿದೆ. ತಕ್ಷಣ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

‘ಶಾಸಕ ಕೃಷ್ಣನಾಯ್ಕ ಅವರು ₹ 3 ಕೋಟಿ ವೆಚ್ಚದಲ್ಲಿ ಈ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ 5 ತಿಂಗಳ ಹಿಂದೆ ಭೂಮಿಪೂಜೆ ಮಾಡಿ ಹೋಗಿದ್ದಾರೆ. ಇನ್ನೂ ಕಾಮಗಾರಿ ಪ್ರಾರಂಭವಾಗಿಲ್ಲ. ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಅವರ ಸ್ವಗ್ರಾಮವಾಗಿದ್ದರೂ ಅವರಿಂದ ಒಂದು ರಸ್ತೆ ದುರಸ್ತಿ ಮಾಡಿಸಿಕೊಳ್ಳಲು ಆಗಿಲ್ಲ. ಒಂದು ತಿಂಗಳೊಳಗೆ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದಿದ್ದಲ್ಲಿ ಹಾಲಿ, ಮಾಜಿ ಶಾಸಕರ ನಿರ್ಲಕ್ಷ್ಯ ಖಂಡಿಸಿ ರಸ್ತೆ ತಡೆ ಹಮ್ಮಿಕೊಳ್ಳುತ್ತೇವೆ ಎಂದು ನಂದಿಹಳ್ಳಿಯ ವಿ.ಬಿ. ಮಲ್ಲಪ್ಪ, ವಿ.ಬಿ.ಶಿವಪುತ್ರ, ಎಸ್.ಕೊಟ್ರೇಶ, ಎಂ.ವಿರೂಪಾಕ್ಷ, ಎಂ.ಕೊಟ್ರೇಶ, ಬಿ. ಮಲ್ಲನಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-25-1001734260

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.