ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ ಜಿಲ್ಲೆಯಲ್ಲಿ ಭಾರಿ ಮಳೆ: ತುಂಬಿ ಹರಿಯುತ್ತಿರುವ ಚೆಕ್ ಡ್ಯಾಂ, ಹಳ್ಳಗಳು

Last Updated 2 ಆಗಸ್ಟ್ 2022, 3:18 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಂಗಳವಾರ ಬೆಳಿಗ್ಗೆ ಭಾರಿ ಮಳೆಯಾಗಿದೆ.

ಬಿರುಸಿನ ವರ್ಷಧಾರೆಗೆ ಜಿಲ್ಲೆಯ ಚೆಕ್ ಡ್ಯಾಂಕ, ಹಳ್ಳಗಳು ತುಂಬಿ ಹರಿದಿವೆ. ಚರಂಡಿಗಳು ಉಕ್ಕಿ ಹರಿದು ರಸ್ತೆಯ ಮೇಲೆಲ್ಲಾ ನೀರು ಸಂಗ್ರಹಗೊಂಡಿರುವುದರಿಂದ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತು.

ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮೋರಿಗೇರಿ ಕ್ರಾಸ್ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ಸಂಪರ್ಕ ಕಡಿತಗೊಂಡಿದೆ.
ಜಿಲ್ಲೆಯ ಕೂಡ್ಲಿಗಿ, ಕೊಟ್ಟೂರು, ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹೂವಿನಹಡಲಿ ಹಾಗೂ ಹರಪನಹಳ್ಳಿ ತಾಲ್ಲೂಕಿನಲ್ಲಿ ಭಾರಿ ಮಳೆಯಾಗಿದೆ.

ಬೆಳಿಗ್ಗೆ ಐದು ಗಂಟೆಗೆ ಆರಂಭಗೊಂಡಿರುವ ಮಳೆ‌ಈಗಲೂ ಮುಂದುವರೆದಿದೆ. ಸತತ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲ ಶಾಲೆಯವರು ರಜೆ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT