ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ: ಬಳ್ಳಾರಿಯಲ್ಲಿ 31, ವಿಜಯನಗರದಲ್ಲಿ 24 ಮನೆಗಳಿಗೆ ಹಾನಿ

Last Updated 6 ಸೆಪ್ಟೆಂಬರ್ 2022, 12:56 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಸೋಮವಾರ ರಾತ್ರಿ ಸುರಿದ ಮಳೆಗೆ ಅವಳಿ ಜಿಲ್ಲೆಗಳಾದ ಬಳ್ಳಾರಿ–ವಿಜಯನಗರದಲ್ಲಿ ಹಲವು ಮನೆಗಳಿಗೆ ಹಾನಿಯಾಗಿದ್ದು, ಬೆಳೆ ಹಾಳಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ 31 ಮನೆಗಳಿಗೆ ಹಾನಿಯಾಗಿದೆ. ಕಂಪ್ಲಿಯಲ್ಲಿ 18, ಸಂಡೂರಿನಲ್ಲಿ 6, ಕುರುಗೋಡಿನಲ್ಲಿ 4, ಸಿರುಗುಪ್ಪದಲ್ಲಿ 3 ಮನೆಗಳಿಗೆ ಹಾನಿಯಾಗಿದೆ. ಇನ್ನು, ವಿಜಯನಗರ ಜಿಲ್ಲೆಯಲ್ಲಿ 24 ಮನೆಗಳಿಗೆ ಹಾನಿಯಾಗಿದೆ. ಹರಪನಹಳ್ಳಿಯಲ್ಲಿ ಅತಿ ಹೆಚ್ಚು, 9 ಮನೆಗಳು ಕುಸಿದು ಬಿದ್ದಿವೆ. ತಾಲ್ಲೂಕಿನ ಕಣಿವಿಹಳ್ಳಿಯಲ್ಲಿ ರಾತ್ರಿ ಗುಡ್ಡ ಕುಸಿದು ಎರಡು ಮನೆಗಳ ಮೇಲೆ ಮಣ್ಣು ಬಿದ್ದಿದೆ. ಜಿಲ್ಲೆಯ ಕೂಡ್ಲಿಗಿಯಲ್ಲಿ 6, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿಯಲ್ಲಿ ತಲಾ 5 ಮನೆಗಳಿಗೆ ಹಾನಿಯಾಗಿದೆ.

ಸತತ ಮಳೆಯಿಂದ ತೇವಾಂಶ ಹೆಚ್ಚಾಗಿ ಹೂವಿನಹಡಗಲಿಯಲ್ಲಿ ಈರುಳ್ಳಿ ಬೆಳೆಗೆ ಕೊಳೆರೋಗ ಕಾಣಿಸಿಕೊಂಡಿದೆ. ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಂಗಳವಾರವೂ ಉತ್ತಮ ಮಳೆಯಾಗಿದೆ.

ಹೊಸಪೇಟೆ ತಾಲ್ಲೂಕಿನ ಗಾದಿಗನೂರಿನಲ್ಲಿ 8 ಸೆಂ.ಮೀ, ಕಮಲಾಪುರದಲ್ಲಿ 6 ಸೆಂ.ಮೀ, ಹೊಸಪೇಟೆಯಲ್ಲಿ 5.82 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT