ಹೂವಿನಹಡಗಲಿ: ಇಲ್ಲಿನ ಪುರಸಭೆಯ ಲೆಕ್ಕಾಧಿಕಾರಿ ವಿಜಯಕುಮಾರ್ ಕನಕಗಿರಿ (40) ಬುಧವಾರ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ತೀವ್ರ ಹೃದಯಾಘಾತದಿಂದ ನಿಧನರಾದರು.

ಬೆಳಿಗ್ಗೆ ತಮ್ಮ ಶಾಖೆಯಲ್ಲಿ ಅವರು ಕೆಲಸ ಮಾಡುತ್ತಿದ್ದಾಗ ಕುಳಿತ ಕುರ್ಚಿಯಲ್ಲೇ ಎರಗಿದರು. ಸಿಬ್ಬಂದಿ ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದರು.

ವಿಜಯಕುಮಾರ್ ಕೊಪ್ಪಳ ನಗರ ನಿವಾಸಿಯಾಗಿದ್ದು, ಅವರಿಗೆ ಪತ್ನಿ, 6 ತಿಂಗಳ ಗಂಡು ಮಗು ಇದೆ. ಕೊಪ್ಪಳ ನಗರದಲ್ಲಿ ಗುರುವಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.