ಹೂವಿನಹಡಗಲಿ: ‘ಶಿಕ್ಷಣದಿಂದ ಮಾತ್ರ ಸದೃಢ ಸಮಾಜ, ದೇಶ ಕಟ್ಟಲು ಸಾಧ್ಯ’ ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.

ಪಟ್ಟಣದ ಜಿಬಿಆರ್ ಕಾಲೇಜಿನಲ್ಲಿ ಶಾಸಕರ ಜನ್ಮದಿನ ಪ್ರಯುಕ್ತ ಮಂಗಳವಾರ ಹಮ್ಮಿಕೊಂಡಿದ್ದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಗ್ರಾಮೀಣ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಉದ್ಯೋಗ ನೀಡುವುದು ಮೊದಲ ಆದ್ಯತೆ’ ಎಂದು ತಿಳಿಸಿದರು.

ಪ್ರಾಚಾರ್ಯ ಎಸ್.ಎಸ್. ಪಾಟೀಲ್ ಮಾತನಾಡಿ, ‘ಆರ್ಥಿಕ ಸ್ಥಿರತೆ ಇಲ್ಲದೇ ಸಾಮಾಜಿಕ ಸ್ಥಾನಮಾನಗಳು ಸಿಗುವುದಿಲ್ಲ. ಯುವಕರಿಗೆ ಉದ್ಯೋಗ ಮತ್ತು ಮಹಿಳೆಯರಿಗೆ ಸ್ವಯಂ ಉದ್ಯೋಗ ತರಬೇತಿ ಮೂಲಕ ಆರ್ಥಿಕ ಸ್ಥಿರತೆ ತಂಡುಕೊಡುವ ಶಾಸಕರ ಪ್ರಯತ್ನ ಶ್ಲಾಘನೀಯ’ ಎಂದರು.

ವೀ.ವಿ ಸಂಘದ ಕಾರ್ಯದರ್ಶಿ ಡಾ.ಅರವಿಂದ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿ.ಮೋಹನರೆಡ್ಡಿ ಮಾತನಾಡಿದರು. ಮಾಜಿ ಶಾಸಕ ಹಾಲಪ್ಪ ನಂದಿಹಳ್ಳಿ, ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಎಸ್.ಸಂಜೀವರೆಡ್ಡಿ, ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ್, ಮುಖಂಡರಾದ ಮುದುಕಪ್ಪ ಕೋಡಿಹಳ್ಳಿ, ಬಸವರಾಜ ಬೀರಬ್ಬಿ, ಎಚ್.ಪೂಜಪ್ಪ ಸೇರಿದಂತೆ ಇತರರು ಇದ್ದರು.

ಈ ವೇಳೆ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ 1700ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳ ಪೈಕಿ 70 ಜನ ಅಂಗವಿಕಲರು ಸೇರಿದಂತೆ 600 ಜನರಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸಲಾಯಿತು. ಜೆಡಬ್ಲೂಎಸ್, ಎಬಿಬಿ, ಅಮೆಜಾನ್, ಮುತ್ತೂಟ್, ಐಬ್ಲೂ ಸಲ್ಯೂಷನ್ಸ್, ಎಲ್ಐಸಿ ಸೇರಿದಂತೆ 80ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-25-66939258

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.