ಹೂವಿನಹಡಗಲಿ:‘ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗ ಬಾರದು. ಯಾವುದೇ ತಾಂತ್ರಿಕ ಅಡೆತಡೆಗಳಿದ್ದಲ್ಲಿ ಅಧಿಕಾರಿಗಳು ಸರಿಪಡಿಸಬೇಕು’ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಟಿ.ಭರತ್ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ರಾಜೀವ್ ಗಾಂಧಿ ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

‘ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆ ಬಡವರ ಬದುಕಿಗೆ ಆಸರೆಯಾಗಿವೆ. ಅನರ್ಹರು ಯೋಜನೆಯನ್ನು ದುರುಪಯೋಗಪಡಿಸಿಕೊಳ್ಳದಂತೆ ಎಚ್ಚರ ವಹಿಸಬೇಕು’ ಎಂದು ತಿಳಿಸಿದರು.

‘ಜೆಸ್ಕಾಂನ ಮೀಟರ್ಗಳು ಗ್ರಾಮೀಣ ಪ್ರದೇಶದಲ್ಲಿ ಗೃಹಜ್ಯೋತಿ ಶೂನ್ಯ ಬಿಲ್ಗಳನ್ನು ನೀಡುತ್ತಿಲ್ಲ. ಪ್ರತಿ ಸಭೆಯಲ್ಲೂ ಈ ವಿಚಾರ ಪ್ರಸ್ತಾಪಿಸಿದರೂ ಅಧಿಕಾರಿಗಳು ಗಮನಹರಿಸುತ್ತಿಲ್ಲ’ ಎಂದು ಸದಸ್ಯ ಜಿ.ಶಿವಕುಮಾರಗೌಡ ಅಸಮಾಧಾನ ವ್ಯಕ್ತಪಡಿಸಿದರು.

ಕೃಷಿ ಪಂಪ್ಸೆಟ್ಗಳ ವಿದ್ಯುತ್ ಪರಿವರ್ತಕಗಳ ದುರಸ್ತಿ ಕಾರ್ಯವನ್ನು ಜೆಸ್ಕಾಂನವರು ಸಕಾಲದಲ್ಲಿ ಮಾಡದೆ ಗ್ರಾಹಕರನ್ನು ಅಲೆದಾಡಿಸುತ್ತಾರೆ. ಕೇಳಿದಷ್ಟು ಹಣ ಕೊಟ್ಟರೆ ಮಾತ್ರ ಪರಿವರ್ತಕಗಳನ್ನು ಕೊಡುತ್ತಾರೆ ಎಂದು ಸದಸ್ಯರು ಆರೋಪಿಸಿದರು.

ಈ ವೇಳೆ ತಾಲ್ಲೂಕು ಪಂಚಾಯಿತಿ ಇಒ ಜಿ. ಪರಮೇಶ್ವರ, ಜಿಲ್ಲಾ ಸಮಿತಿ ಸದಸ್ಯ ಗುರುವಿನ ರಾಜು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-25-593040697

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.