ಹೊಸಪೇಟೆ: ನಗರದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಆರು ಮಕ್ಕಳು ಮತ್ತು ಆರು ತಾಯಂದಿರನ್ನು ಮಕ್ಕಳ ಸಹಾಯವಾಣಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ರಕ್ಷಿಸಿವೆ.

ಇಲ್ಲಿನ ಪುನೀತ್ ರಾಜ್ಕುಮಾರ್ ವೃತ್ತದಲ್ಲಿ ಪುಸ್ತಕ ಮಾರಾಟದ ಮೂಲಕ ಮಕ್ಕಳು, ತಾಯಂದಿರು ಭಿಕ್ಷೆ ಬೇಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ವೇಳೆ ಈ ಮಕ್ಕಳು ಮತ್ತು ತಾಯಂದಿರು ಪತ್ತೆಯಾದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬಳ್ಳಾರಿಯ ಗುಡಾರ ನಗರ, ಕೊಪ್ಪಳ ಮತ್ತು ಕಾರಟಗಿ ತಾಲ್ಲೂಕಿನ ಸಿದ್ದಾಪುರದ ಮಕ್ಕಳು ಮತ್ತು ತಾಯಂದಿರು ಭಿಕ್ಷಾಟನೆ ಮಾಡುತ್ತಿರುವ ಮಾಹಿತಿ ಲಭಿಸಿತ್ತು. ವಿಜಯನಗರದ ಮಕ್ಕಳ ರಕ್ಷಣಾ ಘಟಕ, ಅಕ್ಕ ಪಡೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸರ ನೇತೃತ್ವದಲ್ಲಿ ಜಂಟಿ ದಾಳಿ ನಡೆಸಿ ಈ ರಕ್ಷಣಾ ಕಾರ್ಯ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-25-152952679

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.