ಹೊಸಪೇಟೆ (ವಿಜಯನಗರ): ನಗರದ ಹರಿಹರ ರಸ್ತೆಯ ಗುರು ಕಾಲೇಜ್ ಬಳಿ ಗುರುವಾರ ಬೆಳಿಗ್ಗೆ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಸರ್ಕಾರಿ ಬಸ್ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಕೆಎಸ್ಆರ್ಟಿಸಿ ಬಸ್ ದಾವಣಗೆರೆಯಿಂದ ನಗರದತ್ತ ಬರುತ್ತಿತ್ತು. ಆಗ ವ್ಯಕ್ತಿ ಏಕಾಏಕಿ ರಸ್ತೆ ದಾಟಲು ಯತ್ನಿಸಿದಾಗ ಬಸ್ ಆತನಿಗೆ ಡಿಕ್ಕಿ ಹೊಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ ಚಾಲಕ ಗದಗ ಜಿಲ್ಲೆ ರೋಣ ತಾಲ್ಲೂಕಿನ ಶರಣಪ್ಪ ವಿರುದ್ಧ ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ವ್ಯಕ್ತಿ ಸುಮಾರು 40 ವರ್ಷದವನಿದ್ದು, ಆತನ ಗುರುತು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-25-1637628280

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.