ಸೋಮವಾರ, ಜನವರಿ 17, 2022
27 °C

ಹೊಸಪೇಟೆ: ಚನ್ನಮ್ಮ ಶಾಲೆಯ 22 ಮಕ್ಕಳು, 6 ಶಿಕ್ಷಕರಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ನಗರ ಹೊರವಲಯದ ಕಿತ್ತೂರು ರಾಣಿ ಚನ್ನಮ್ಮ ಶಾಲೆಯ 22 ವಿದ್ಯಾರ್ಥಿಗಳು, 6 ಜನ ಶಿಕ್ಷಕರಿಗೆ ಕೋವಿಡ್‌ ದೃಢಪಟ್ಟಿದೆ.

‘ಆರು ಜನ ಶಿಕ್ಷಕರು ಸೇರಿದಂತೆ 19 ವಿದ್ಯಾರ್ಥಿಗಳಿಗೆ ಗುರುವಾರ ಕೋವಿಡ್‌ ದೃಢಪಟ್ಟಿತ್ತು. ಶುಕ್ರವಾರ ಪುನಃ ಒಂಬತ್ತು ಮಕ್ಕಳಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಶಾಲೆಯ ಎಲ್ಲ ಸಿಬ್ಬಂದಿ, ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇನ್ನಷ್ಟೇ ಪರೀಕ್ಷಾ ವರದಿ ಕೈಸೇರಬೇಕಿದೆ.

ಇಡೀ ಶಾಲೆಯನ್ನು ಸೀಲ್‌ಡೌನ್‌ ಮಾಡಲಾಗಿದೆ‘ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್‌ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು