ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಪೆಟ್ರೋಲ್, ಡೀಸೆಲ್ಗೆ ಕೊರತೆ ಆಗಿಲ್ಲ, ಜನ ಗೊಂದಲಕ್ಕೆ ಒಳಗಾಗಬಾರದು ಎಂದು ಹೇಳಿರುವ ಜಿಲ್ಲಾಡಳಿತ, ಶೇ 30ರ ಮಿತಿಯಲ್ಲಿ ವಾಣಿಜ್ಯ ಸಿಲಿಂಡರ್ ಪೂರೈಕೆಯೂ ನಿಧಾನವಾಗಿ ಆರಂಭವಾಗಿದೆ ಎಂದು ಹೇಳಿದೆ.

ಬುಧವಾರ ಇಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಇಂಧನ ಪೂರೈಕೆ ಕಂಪನಿಗಳ ಅಧಿಕಾರಿಗಳು ಹಾಗೂ ಬಂಕ್ ಮಾಲೀಕರ ಸಭೆ ನಡೆಸಿದ ಬಳಿಕ ಈ ಹೇಳಿಕೆ ನೀಡಿದ್ದು, ಬಂಕ್ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ನಿಯಮಬಾಹಿರವಾಗಿ ಬಾಟಲ್ ಅಥವಾ ಕ್ಯಾನ್ಗಳಲ್ಲಿ ಮಾರಾಟ ಮಾಡುವುದನ್ನು ನಿಷೇಧಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಮುಗಿದಿದೆ ಎಂದು ಹೇಳಿ ಅದನ್ನು ಸಂಗ್ರಹಿಸಿ ಇಟ್ಟುಕೊಳ್ಳುವುದು ತಪ್ಪು. ಹೀಗೆ ಮಾಡುವವರ ವಿರುದ್ಧ 1955ರ ಅಗತ್ಯ ಸಾಮಗ್ರಿಗಳ ಕಾಯ್ದೆ, 1934ರ ಪೆಟ್ರೋಲಿಯಂ ಕಾಯ್ದೆ ಹಾಗೂ 2002ರ ಪೆಟ್ರೋಲಿಯಂ ನಿಯಮಗಳ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೇ ಶಾಂತ ರೀತಿಯಿಂದ ಸಹಕರಿಸಬೇಕು. ಏನೇ ಅಕ್ರಮ ಅಥವಾ ಗಲಾಟೆ ಕಂಡುಬಂದರೆ 112 ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ.

‘ಇತ್ತೀಚಿನ ದಿನಗಳಲ್ಲಿ ಇಂಧನ ಕೊರತೆ ಬಗ್ಗೆ ಕೆಲವು ಸುಳ್ಳು ವದಂತಿಗಳು ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಜಿಲ್ಲೆಯಲ್ಲಿ ಇಂಧನ ಕೊರತೆ ಇರುವುದಿಲ್ಲ ಹಾಗೂ ಇಂಧನ ಕೊರತೆ ಇರುವುದು ಕಂಡುಬಂದಿರುವುದಿಲ್ಲ. ಪ್ರಸ್ತುತ ಜಿಲ್ಲೆಯಲ್ಲಿ ಯಥಾ ಪ್ರಕಾರ ಅಗತ್ಯಕ್ಕೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್ನ ಪ್ರಮಾಣವು ಲಭ್ಯವಿದ್ದು, ಸರಬರಾಜು ವ್ಯವಸ್ಥೆಯು ಸಹ ಸಮರ್ಪಕವಾಗಿ ನಡೆಯುತ್ತಿರುತ್ತದೆ. ಸಾರ್ವಜನಿಕರು ಇಂತಹ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಸುಳ್ಳು ವದಂತಿಗಳನ್ನು ಹರಡಬಾರದು. ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ಪೂರೈಕೆ: ಹೊಸಪೇಟೆ ನಗರದ ಸಹಿತ ಜಿಲ್ಲೆಯಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳನ್ನು ಶೇ 30ರ ಮಿತಿಯಲ್ಲಿ ವಿತರಿಸುವ ಕೆಲಸ ಮಂಗಳವಾರದಿಂದ ಆರಂಭವಾಗಿದೆ. ಆದರೆ ಪೂರೈಕೆಯ ವೇಳೆ ದುರ್ಬಳಕೆ ಆಗಬಾರದು ಎಂಬ ಕಾರಣಕ್ಕೆ ಆನ್ಲೈನ್ನಲ್ಲೇ ದುಡ್ಡು ಪಾವತಿ, ಸಿಲಿಂಡರ್ ವಿತರಿಸಿದ್ದನ್ನು ಖಾತರಿಪಡಿಸುವುದಕ್ಕಾಗಿ ಜಿಪಿಎಸ್ ಆಧಾರಿತ ಫೋಟೊ ಸಾಕ್ಷ್ಯಗಳನ್ನು ಕಡ್ಡಾಯಗೊಳಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕ ರಿಯಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-25-1846278155

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.