ಹೊಸಪೇಟೆ: ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯವನ್ನು ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಅತ್ಯಂತ ವೈಜ್ಞಾನಿಕವಾಗಿ ಮತ್ತು ಸಮರ್ಪಕವಾಗಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ಇಲ್ಲಿ ಬುಧವಾರ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಕಸ ವಿಲೇವಾರಿಯಲ್ಲಿ ನಿರ್ಲಕ್ಷ್ಯ ತೋರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಯೋಜನೆಯು ಕೇವಲ ಕಸದ ವಿಲೇವಾರಿಯನ್ನಷ್ಟೇ ಗುರಿಯಾಗಿಟ್ಟುಕೊಳ್ಳದೆ, ಪರಿಸರ ಸಮತೋಲನ ಕಾಪಾಡಿಕೊಳ್ಳುವುದು ಯೋಜನೆಯ ಉದ್ದೇಶವಾಗಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಸ ಎಲ್ಲೆಂದರಲ್ಲಿ ಎಸೆಯದೇ, ಕಸವನ್ನು ಸುಡುವುದಾಗಲಿ ಅಥವಾ ಭೂಮಿಯಲ್ಲಿ ಹೂಳುವುದಾ ಗಲಿ ಮಾಡದೆ, ವೈಜ್ಞಾನಿಕ ವಿಲೇವಾರಿ ಮಾಡುವ ಮೂಲಕ ತ್ಯಾಜ್ಯ ಮುಕ್ತ ಪರಿಸರ ನಿರ್ಮಿಸಬೇಕು. ಒಮ್ಮೆ ಬಳಸಿ ಬಿಸಾಡುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆಗೆ ನೀಡಬೇಕು ಎಂದು ಡಿ.ಸಿ ಹೇಳಿದರು.

‘ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಹೊಸ ನಿಯಮ ಅನ್ವಯ ದಿನಕ್ಕೆ 100 ಕೆ.ಜಿಗಿಂತ ಹೆಚ್ಚು ತ್ಯಾಜ್ಯ ಉತ್ಪಾದಿಸುವ ಸಂಸ್ಥೆಗಳು ಅಥವಾ 20,000 ಚದರ ಮೀಟರ್ಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ಅಪಾರ್ಟ್ಮೆಂಟ್ ಮತ್ತು ವಾಣಿಜ್ಯ ಮಳಿಗೆಗಳು ತಮ್ಮ ಆವರಣದಲ್ಲೇ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಹೊಂದುವುದು ಕಡ್ಡಾಯವಾಗಿದೆ. ತಪ್ಪಿದಲ್ಲಿ ಅಂತಹ ಸಂಸ್ಥೆಗಳು ಬೃಹತ್ ತ್ಯಾಜ್ಯ ಉತ್ಪಾದಕ ಜವಾಬ್ದಾರಿ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಿದೆ. ಈ ನಿಯಮ ಉಲ್ಲಂಘಿಸಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಸ್ಥಳದಲ್ಲೇ ದಂಡ ವಿಧಿಸುವ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ’ ಎಂದು ಸೂಚನೆ ನೀಡಿದರು.

ಪ್ರತಿ ವರ್ಷ ಜೂನ್ 30ರೊಳಗೆ ತ್ಯಾಜ್ಯ ಸಂಸ್ಕರಣೆಯ ಸಂಪೂರ್ಣ ಮಾಹಿತಿ ಯನ್ನು ಆನ್ಲೈನ್ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡುವುದು ಕಡ್ಡಾಯವಾಗಿದೆ ಎಂದು ಹೇಳಿದರು.

ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಮನೋಹರ್, ನಗರಸಭೆ ಪೌರಾಯುಕ್ತ ಎ.ಶಿವಕುಮಾರ್, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ತಹಶೀಲ್ದಾರ್ ಶ್ರುತಿ ಎಂ.ಎಂ. ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-25-765181590

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.