ಹೊಸಪೇಟೆ (ವಿಜಯನಗರ): ಕುಡುತಿನಿ ಮತ್ತು ಸುತ್ತಮುತ್ತಲಿನ ಗ್ರಾಮಗಳ 900 ಎಕರೆ ರೈತರ ಜಮೀನನ್ನು ಜಿಂದಾಲ್ ಕಂಪನಿಗೆ ವರ್ಗಾವಣೆ ಮಾಡುವ ತೀರ್ಮಾನದ ವಿರುದ್ಧ ಪ್ರತಿಭಟನೆ ನಡೆಸಿದ ರೈತ ಮುಖಂಡರು ಮತ್ತು ಸಿಪಿಎಂ ಮುಖಂಡರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಸಿಪಿಎಂ ಜಿಲ್ಲಾ ಘಟಕ ಒತ್ತಾಯಿಸಿದೆ.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಆರ್.ಭಾಸ್ಕರ ರೆಡ್ಡಿ ಈ ಬಗ್ಗೆ ಹೇಳಿಕೆ ನೀಡಿದ್ದು, ‘ಅರ್ಸೆಲರ್ ಮಿತ್ತಲ್ ಕಂಪನಿಗೆ 2012ರಲ್ಲಿ ಕೆಐಎಡಿಬಿ ಸ್ವಾಧೀನ ಮಾಡಿಕೊಂಡಿದ್ದ ರೈತರ ಜಮೀನನ್ನು ಈಗ ಜಿಂದಾಲ್ ಕಂಪನಿಗೆ ಕಳ್ಳತನದ ರೀತಿಯಲ್ಲಿ ಮಾರಾಟ ಮಾಡಿರುವುದನ್ನು ಖಂಡಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶತಾಯುಗತಾಯ ಜಿಂದಾಲ್ ಕಂಪನಿಗೆ ಜಮೀನನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸುತ್ತಿರುವ ಕೆಐಎಡಿಬಿ ರೈತರ ಹಿತಾಸಕ್ತಿಗೆ ವಿರುದ್ಧವಾಗಿ ದಮನಕಾರಿ ನೀತಿಯನ್ನು ಅನುಸರಿಸುತ್ತಿದೆ ಎಂದು ದೂರಿದ್ದಾರೆ.

ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಸಂಸದರು, ಶಾಸಕರು ಮತ್ತು ಸರ್ಕಾರ ರೈತರ ವಿರುದ್ಧವಾಗಿ ಪೊಲೀಸ್ ಬಲವನ್ನು ಬಳಸಿ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ರೈತರಿಗೆ ಹೆಚ್ಚಿನ ಪರಿಹಾರ ನೀಡಬೇಕು. ನಿಷೇಧಾಜ್ಞೆ ವಿಧಿಸಿರುವುದು ಸರ್ಕಾರದ ದಮನಕಾರಿ ನಿಲುವನ್ನು ಬಿಂಬಿಸುತ್ತದೆ. ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-25-1171382591

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.