ಹೊಸಪೇಟೆ (ವಿಜಯನಗರ): ಯೂರಿಯಾ ಗೊಬ್ಬರ ಅಭಾವ ನಿವಾರಿಸಬೇಕು, ಅದರ ಬೆಲೆ ಇಳಿಸಬೇಕು ಹಾಗೂ ಎಫ್ಐಡಿ ರದ್ದುಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯ ವತಿಯಿಂದ ರಾಜ್ಯ ಸರ್ಕಾರಕ್ಕೆ ಈಚೆಗೆ ಮನವಿ ಸಲ್ಲಿಸಲಾಯಿತು.

ಸಂಘದ (ಕೋಡಿಹಳ್ಳಿ ಚಂದ್ರಶೇಖರ್ ಬಣ) ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳು ಇಲ್ಲಿನ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ತೆರಳಿ ಉಪನಿರ್ದೇಶಕ ನಯೀಂ ಪಾಷಾ ಅವರ ಮೂಲಕ ಕೃಷಿ ಸಚಿವರಿಗೆ ಮನವಿ ಕಳುಹಿಸಿಕೊಟ್ಟರು.

ರಸಗೊಬ್ಬರಗಳ ಬೆಲೆ ಏರಿಕೆಯಿಂದ ರೈತರು ಬಹಳ ಕಷ್ಟದಲ್ಲಿದ್ದಾರೆ. ದಲ್ಲಾಳಿಗಳ ಹಾವಳಿಯಿಂದಲೂ ಕಂಗೆಟ್ಟಿದ್ದಾರೆ. ರೈರರಿಗೆ ಸಮರ್ಪಕವಾಗಿ ಯೂರಿಯಾ ಒದಗಿಸಬೇಕು, ಎಫ್ಐಡಿ ರದ್ದುಪಡಿಸಬೇಕು, ಸರ್ಕಾರಿ ಭೂಮಿ, ಹಳ್ಳ ಪರಂಪೋಕು ಮತ್ತು ಅರಣ್ಯ ಭೂಮಿಗಳಲ್ಲಿ ಸಾಗುವಳಿ ಮಾಡುವ ರೈತರು ಸುಮಾರು 60-70 ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿದ್ದಾರೆ, ಎಫ್ಐಡಿ ಕಡ್ಡಾಯ ಮಾಡಿರುವುದರಿಂದ ಅವರಿಗೆ ಯೂರಿಯಾ ಸಿಗದಂತಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ನಾಗರಾಜ್ ಹೇಳಿದರು.

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ ಕೇಂದ್ರ ಸರ್ಕಾರ ನೀಡುವ ₹6 ಸಾವಿರ ಜತೆಗೆ ರಾಜ್ಯ ಸರ್ಕಾರ ₹4 ಸಾವಿರ ನೀಡಬೇಕು, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಂದ ನಂತರ ಅದು ರದ್ದಾಗಿದೆ. ಹೊಸಪೇಟೆ ತಾಲ್ಲೂಕಿನಲ್ಲಿ ಮಣ್ಣು ಪರೀಕ್ಷೆ ಕೇಂದ್ರವನ್ನು ಕೂಡಲೇ ಆರಂಭಿಸಬೇಕು ಮತ್ತು ಭತ್ತ ಖರೀದಿ ಕೇಂದ್ರವನ್ನು ಕೂಡಲೇ ತೆರೆಯಬೇಕು ಎಂದು ತಾಲ್ಲೂಕು ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ ಒತ್ತಾಯಿಸಿದರು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮನೋಹರ್ ಗೌಡ, ರೈತ ಸಂಘದ ಮುಖಂಡರಾದ ದೊಡ್ಡಗಾಳೇಪ್ಪ, ಸುರೇಶ್, ಭುವನಹಳ್ಳಿ ಬಸವರಾಜ್, ಜಾಕೀರ್ ಹುಸೇನ್, ಗಂಟೆ ಮಂಜುನಾಥ ಸಿಂಗ್ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-25-1337636403

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.