ಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಆರು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿ ಅವರ ಪರಿಹಾರ ನಿಧಿಯಿಂದ ತಲಾ ₹5 ಲಕ್ಷ ನೀಡಲಾಗುವುದು ಎಂದು ಸಂಸದ ಇ.ತುಕಾರಾಂ ಹೇಳಿದರು.

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ನಾಲ್ವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪಘಾತದ ಬಗ್ಗೆ ಮುಖ್ಯಮಂತ್ರಿ ಅವರ ಜತೆಗೆ ಮಾತನಾಡಿರುವೆ, ಸಂಡೂರಿನ ಮೂವರು, ಕೂಡ್ಲಿಗಿಯ ಮೂವರು ಮೃಪತಟ್ಟಿದ್ದಾರೆ ಎಂಬುದನ್ನು ಅವರ ಗಮನಕ್ಕೆ ತಂದೆ. ತಕ್ಷಣ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಪ್ರಕಟಿಸಿದರು ಎಂದರು.

‘ಗಾಯಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ನಾನೇ ಭರಿಸಲಿದ್ದೇನೆ. ಕಂಪನಿಗಳ ಸಿಎಸ್ಆರ್ ನಿಧಿಯಡಿಯಲ್ಲಿ ಗರಿಷ್ಠ ₹1 ಲಕ್ಷದವರೆಗೆ ವೆಚ್ಚ ಭರಿಸುವುದಕ್ಕೆ ಅವಕಾಶ ಇದೆ. ಅದೆಲ್ಲವನ್ನೂ ನಾನು ಒದಗಿಸಿಕೊಡಲಿದ್ದೇನೆ’ ಎಂದು ಸಂಸದರು ಹೇಳಿದರು.
.ಟ್ರಾಕ್ಟರ್–ಟ್ಯಾಂಕರ್ ಅಪಘಾತ: ಜಾತ್ರೆಗೆ ಹೋಗುತ್ತಿದ್ದ ಏಳು ಜನ ದುರ್ಮರಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.