ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಕಳ್ಳಬಟ್ಟಿ ಸಾರಾಯಿ ತಯಾರಿಕೆ, ಅಕ್ರಮ ಮದ್ಯ ಮಾರಾಟ ಮತ್ತು ಸಾಗಣೆಯನ್ನು ಸಂಪೂರ್ಣ ನಿಯಂತ್ರಿಸಿ ಕಳ್ಳಬಟ್ಟಿ ಮುಕ್ತ ಜಿಲ್ಲೆಯಾಗಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ಶುಕ್ರವಾರ ಇಲ್ಲಿನ ತಮ್ಮ ಕಚೇರಿಯಲ್ಲಿ ಕಳ್ಳಬಟ್ಟಿ ನಿರ್ಮೂಲನೆ ಕುರಿತು ಆಯೋಜಿಸಲಾಗಿದ್ದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳ್ಳಭಟ್ಟಿ ತಯಾರಿಕೆ ಮತ್ತು ಅಕ್ರಮ ಮದ್ಯದ ವಹಿವಾಟಿನ ವಿರುದ್ಧ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಅಕ್ರಮ ಮದ್ಯ ಮಾರಾಟ ಅಥವಾ ಸಾಗಣೆ ಮಾಡುವುದು ಕಂಡು ಬಂದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೇ ಕಾನೂನು ಕ್ರಮ ಜರುಗಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ನೆರೆ ಜಿಲ್ಲೆ ಅಥವಾ ರಾಜ್ಯಗಳಿಂದ ಅಕ್ರಮವಾಗಿ ಮದ್ಯ ಸಾಗಣೆಯಾಗುವ ಸಂಭವವಿರುವುದರಿಂದ, ಜಿಲ್ಲೆಯ ಗಡಿ ಭಾಗದ ಚೆಕ್ ಪೋಸ್ಟ್ಗಳಲ್ಲಿ ತಪಾಸಣೆ ತೀವ್ರಗೊಳಿಸಬೇಕು. ಅಬಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆಯು ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಂಶಯಾಸ್ಪದ ಸ್ಥಳಗಳ ಮೇಲೆ ನಿರಂತರವಾಗಿ ದಾಳಿ ನಡೆಸಬೇಕು. ಗ್ರಾಮೀಣ ಭಾಗದ ಹೊಟೇಲ್, ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದನ್ನು ತಡೆಯಲು ಬೀಟ್ ಪೊಲೀಸರು ಮತ್ತು ಅಬಕಾರಿ ನಿರೀಕ್ಷಕರು ಹೆಚ್ಚಿನ ಕಾರ್ಯಾಚರಣೆ ನಡೆಸಬೇಕು ಎಂದು ಸೂಚಿಸಿದರು.

ಅಬಕಾರಿ ಉಪ ಆಯುಕ್ತ ಮಾದೇಶ್ ಮಾತನಾಡಿ, ಜಿಲ್ಲೆಯಲ್ಲಿ ಪರವಾನಗಿ ಪಡೆದ 160 ಮದ್ಯದಂಗಡಿಗಳು ಇದ್ದು, ಇವುಗಳ ಮೇಲೆ ಸದಾ ನಿಗಾ ವಹಿಸಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾಲ ಕಾಲಕ್ಕೆ ಸರಿಯಾಗಿ ಕಳ್ಳಬಟ್ಟಿ ಸಾರಾಯಿ ನಿರ್ಮೂಲನೆ, ಅಕ್ರಮ ಮದ್ಯ ಮಾರಾಟ ಮತ್ತು ಸಾಗಣೆ ಕುರಿತು ಗ್ರಾಮ ಸಭೆ, ಜಾಗೃತಿ ಕಾರ್ಯಾಗಾರ ಆಯೋಜಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ 2010 ರಿಂದ ಈವರೆಗೆ ಯಾವುದೇ ರೀತಿಯ ಪ್ರಕರಣಗಳು ದಾಖಲಾಗಿಲ್ಲ. ಆದರೆ ನೆರೆ ರಾಜ್ಯಗಳಾದ ಗೋವಾ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಿಂದ ಯಾವುದೇ ಪರವಾನಗಿ ಇಲ್ಲದೆ ಸಾಗಣೆ ಮಾಡುತ್ತಿದ್ದುದನ್ನು ತಡೆದು 2023 ರಿಂದ 2026ರ ಫೆಬ್ರುವರಿ ಅಂತ್ಯಕ್ಕೆ 7 ಪ್ರಕರಣ ದಾಖಲಿಸಿ, 293.45 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ದಾಳಿ ನಡೆಸಲಾಗಿದ್ದು, 2024 ಜುಲೈ ನಿಂದ 2025ರ ಜೂನ್ ವರೆಗೆ 892 ಕಡೆ ಹಾಗೂ 2025ರ ಜುಲೈ ನಿಂದ ಈ ವರ್ಷದ ಫೆಬ್ರುವರಿ 16ರವರೆಗೆ 872 ಸೇರಿ ಒಟ್ಟು 1,764 ಕಡೆ ದಾಳಿ ನಡೆಸಿ 755 ಲೀಟರ್ ಮದ್ಯ ಮತ್ತು 152ಲೀ ಬಿಯರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಎಎಸ್ಪಿ ಜಿ.ಮಂಜುನಾಥ, ಎಡಿಸಿ ಇ. ಬಾಲಕೃಷ್ಣಪ್ಪ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-25-1064129496

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.