ಹೊಸಪೇಟೆ: ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಮತ್ತು ಹಿಂಗಾರು ಬಿಳಿಜೋಳದ ಖರೀದಿ ಪ್ರಕ್ರಿಯೆಯು ಮೇ 30ಕ್ಕೆ ಮುಕ್ತಾಯಗೊಳ್ಳಲಿದೆ. ಈಗಾಗಲೇ ನೋಂದಾಯಿಸಿಕೊಂಡು ಜೋಳ ಮಾರಾಟ ಮಾಡಲು ಬಾಕಿ ಇರುವ ಜಿಲ್ಲೆಯ ರೈತರು ನಿಗದಿತ ದಿನಾಂಕದೊಳಗೆ ತಮ್ಮ ವ್ಯಾಪ್ತಿಯ ಖರೀದಿ ಕೇಂದ್ರಗಳಿಗೆ ತೆರಳಿ ನಿಯಮಾನುಸಾರ ಮಾರಾಟ ಮಾಡುವಂತೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಕೋರಿದ್ದಾರೆ.

ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತವು ಖರೀದಿ ಏಜೆನ್ಸಿಯಾಗಿದ್ದು, ಪ್ರತಿ ಎಕರೆಗೆ 15 ಕ್ವಿಂಟಲ್ನಂತೆ ಗರಿಷ್ಠ 150 ಕ್ವಿಂಟಲ್ ವರೆಗೆ ಪ್ರತಿ ಕ್ವಿಂಟಲ್ಗೆ ಹೈಬ್ರಿಡ್ ಜೋಳಕ್ಕೆ ₹3,699 ಹಾಗೂ ಜೋಳ ಮಾಲ್ದಂಡಿಗೆ ₹3,749 ನಂತೆ ಖರೀದಿಸಲಾಗುತ್ತಿದೆ. ಮಾಹಿತಿಗೆ ಎಪಿಎಂಸಿ ಯಾರ್ಡ್ಗಳಲ್ಲಿರುವ ಖರೀದಿ ಕೇಂದ್ರ ಸಂಪರ್ಕಿಸಲು ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-25-814895707

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.