ಹೊಸಪೇಟೆ: ತಾಲ್ಲೂಕಿನ ಗ್ರಾಮೀಣ ಭಾಗದ ಸಾರ್ವಜನಿಕರ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ, ವಿಸ್ತಾರ ಫೈನಾನ್ಸ್, ಸಮರ್ಪಕ ಸೇವಾ ಟ್ರಸ್ಟ್, ಕೆ.ಎಸ್. ಆಸ್ಪತ್ರೆ ಕೊಪ್ಪಳ ಹಾಗೂ ಹಿಂದೂ ಸೇವಾ ಪ್ರತಿಷ್ಠಾನ ಸಹಯೋಗದಲ್ಲಿ ಉಚಿತ ಸಂಚಾರಿ ಆರೋಗ್ಯ ಘಟಕಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಮಂಗಳವಾರ ಚಾಲನೆ ನೀಡಿದರು.

ಗ್ರಾಮೀಣ ಭಾಗದವರಿಗೆ ಇದೊಂದು ವರದಾನವಾಗಿದ್ದು, ಇದರ ಪ್ರಯೋಜನವನ್ನು ಜನರು ಪಡೆಯಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಎಸ್ಪಿ ಎಸ್.ಜಾಹ್ನವಿ ಮಾತನಾಡಿದರು. ಡಿಎಚ್ಒ ಡಾ. ಎಲ್.ಆರ್. ಶಂಕರ್ ನಾಯ್ಕ್, ತಾಲ್ಲೂಕು ಪಂಚಾಯಿತಿ ಇಒ ಆಲಂ ಬಾಷಾ, ಹಿಂದೂ ಸೇವಾ ಪ್ರತಿಷ್ಠಾನದ ಕೇಶವ ಕೆ.ಎಸ್., ಭೀಮರಾವ್ ದೇಶಪಾಂಡೆ, ವಿಸ್ತಾರ ಫೈನಾನ್ಸಿನ ವ್ಯವಸ್ಥಾಪಕ ನೂರ್ ಮಹಮ್ಮದ್ ರವರು, ಕೆ.ಎಸ್. ಆಸ್ಪತ್ರೆಯ ಡಾ.ವಿಶ್ವನಾಥ್, ಚಂದ್ರಕಾಂತ್ ಕಾಮತ್, ಕಟಗಿ ರಾಮಕೃಷ್ಣ, ಕಟಗಿ ಜಂಬಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-25-554381682

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.