ಹೊಸಪೇಟೆ: ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನ ಆಚರಿಸಲಾಯಿತು. ಪಕ್ಷದ ತತ್ವ, ಸಿದ್ಧಾಂತ ಒಪ್ಪಿಕೊಂಡು ಇಮ್ತಿಯಾಜ್, ರೆಹಮಾನ್ ಅವರು ತಮ್ಮ ಸಂಗಡಿಗರೊಂದಿಗೆ ಪಕ್ಷ ಸೇರ್ಪಡೆಯಾದರು.

ಇಮ್ತಿಯಾಜ್ ಅವರನ್ನು ಹೊಸಪೇಟೆ ಮಂಡಲ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಹಾಗೂ ರೆಹಮಾನ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂಬುದನ್ನು ತಿಳಿಸಲಾಯಿತು. ಜತೆಗೆ ಅನುಪಮಾ ಉಮೇಶ್ ದೇವರಮನಿ ಎಂಬುವವರು ಸಹ ಪಕ್ಷ ಸೇರಿದರು.

ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ರಾಘವೇಂದ್ರ ಮಾತನಾಡಿ, 1951ರಲ್ಲಿ ಅತ್ಯಂತ ನಿಷ್ಠಾವಂತ ಹಾಗೂ ಧೀಮಂತ ನಾಯಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ, ದೀನ್ ದಯಾಳು ಉಪಾಧ್ಯಾಯ ಇವರ ನೇತೃತ್ವದಲ್ಲಿ ಜನಸಂಘ ಎಂಬ ಪಕ್ಷ ನಿರ್ಮಾಣವಾಯಿತು. 1980ರಲ್ಲಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾನಿ, ಮುರಳಿ ಮನೋಹರ ಜೋಶಿ ಇವರ ನೇತೃತ್ವದಲ್ಲಿ ಈ ಜನಸಂಘ ಪಕ್ಷವು ಭಾರತೀಯ ಜನತಾ ಪಕ್ಷವಾಗಿ ಮರುಸ್ಥಾಪನೆಗೊಂಡಿತು. ಅಂದಿನಿಂದ ಇಂದಿನವರೆಗೆ ಅನೇಕ ನಿಷ್ಠಾವಂತ ಮುಖಂಡರು, ಧೀಮಂತ ನಾಯಕರು ಈ ಪಕ್ಷಕ್ಕಾಗಿ ದುಡಿದಿದ್ದಾರೆ ಎಂದರು.

ಜಿಲ್ಲಾ ಉಪಾಧ್ಯಕ್ಷ ಸಂದೀಪ್ ಸಿಂಗ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಹನುಮಂತಪ್ಪ, ಮಂಡಲ ಅಧ್ಯಕ್ಷ ಶಂಕರ್ ಮೇಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಕಿಚಡಿ ಕೊಟ್ರೇಶ್, ಮಂಡಲದ ಪ್ರಧಾನ ಕಾರ್ಯದರ್ಶಿ ಮಧುರ ಚನ್ನಶಾಸ್ತ್ರಿ, ನಟರಾಜ್, ಗೌಳಿ ಬಸವರಾಜ್, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಉಮಾದೇವಿ, ಪೂರ್ಣಿಮಾ, ಕವಿತಾ, ರೇಣುಕ ಗವಿ, ಸುಮಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-25-2015125862

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.