ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ | ಎರಡು ಪ್ರತ್ಯೇಕ ಪ್ರಕರಣ: ₹6 ಲಕ್ಷ ನಗದು ವಶ

Last Updated 2 ಏಪ್ರಿಲ್ 2023, 10:33 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಜಿಲ್ಲೆಯ ಎರಡು ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರು ಭಾನುವಾರ ₹6 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ತಾಲ್ಲೂಕಿನ ಭುವನಹಳ್ಳಿ ಚೆಕ್ ಪೋಸ್ಟ್‌ನಲ್ಲಿ ಬಳ್ಳಾರಿಯಿಂದ ಹುಬ್ಬಳ್ಳಿ ಕಡೆಗೆ ಸಾಗಿಸುತ್ತಿದ್ದ ₹4 ಲಕ್ಷ ಹಾಗೂ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಚೆಕ್‌ಪೋಸ್ಟ್‌ನಲ್ಲಿ ಹಿರೇಕೆರೂರಿನಿಂದ ಮಾಗಳಕ್ಕೆ ದಾಖಲೆ ಇಲ್ಲದೆ ಕಾರಿನಲ್ಲಿ ಕೊಂಡೊಯ್ಯುತ್ತಿದ್ದ ₹2 ಲಕ್ಷ ನಗದು ಹಣ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಹೊಸಪೇಟೆ ಗ್ರಾಮೀಣ ಮತ್ತು ಹಿರೇಹಡಗಲಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT