ಹೊಸಪೇಟೆ (ವಿಜಯನಗರ): ನಗರದಲ್ಲಿ ದಶಕಗಳಿಂದ ಸ್ಥಗಿತಗೊಂಡಿರುವ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ, ತಮಿಳುನಾಡು ಮಾದರಿಯನ್ನು ಅನುಸರಿಸಿ ಖಾಸಗಿ ಸಹಭಾಗಿತ್ವದಲ್ಲಿ ಕಾರ್ಖಾನೆ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.

ತಾಲ್ಲೂಕಿನ ನಾಗೇನಹಳ್ಳಿಯಲ್ಲಿ ಹಾಗೂ ನಗರದ ಎಸ್ಪಿ ಕಚೇರಿ ಬಳಿ ಒಟ್ಟು ₹50 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಎರಡು ವಿದ್ಯುತ್ ಉಪಕೇಂದ್ರಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸಕ್ಕರೆ ಕಾರ್ಖಾನೆ ಪುನರಾರಂಭದಿಂದ ರೈತರಿಗೆ ಕಬ್ಬಿಗೆ ಸರಿಯಾದ ಬೆಲೆ ಸಿಗುವುದಲ್ಲದೆ, ಸಕಾಲಕ್ಕೆ ಕಟಾವು ಪ್ರಕ್ರಿಯೆಯೂ ಸುಗಮವಾಗಲಿದೆ ಎಂದರು.

ಜಿಲ್ಲೆಯ ದೀರ್ಘಕಾಲದ ವಿದ್ಯುತ್ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಲು ಎರಡು ಬೃಹತ್ ಸಬ್ಸ್ಟೇಷನ್ಗಳ ಸ್ಥಾಪನೆಗೆ ಚಾಲನೆ ನೀಡಲಾಗಿದೆ. ನಾಗೇನಹಳ್ಳಿ ಸಬ್ಸ್ಟೇಷನ್ ₹ 23.26 ಕೋಟಿ ವೆಚ್ಚದಲ್ಲಿ ಹಾಗೂ ಎಸ್ಪಿ ಕಚೇರಿ ಬಳಿ ₹27 ಕೋಟಿ ವೆಚ್ಚದಲ್ಲಿ ಮತ್ತೊಂದು ಸಬ್ಸ್ಟೇಷನ್ ಸೇರಿ ನಿರ್ಮಾಣವಾಗಲಿದೆ ಎಂದರು.

ರಾಯರಕೆರೆಯ ಹಳೆಯ ಸಬ್ಸ್ಟೇಷನ್ ಅನ್ನು 2*20 ಎಂವಿಎ ಸಾಮರ್ಥ್ಯಕ್ಕೆ ಏರಿಸಲಾಗುತ್ತಿದ್ದು, ಇದರಿಂದ ಈ ಭಾಗದ ಜನತೆಗೆ 24x7 ವಿದ್ಯುತ್ ದೊರೆಯಲಿದೆ. ಈ ಯೋಜನೆಗಳು 2027ರ ಸೆಪ್ಟೆಂಬರ್ ವೇಳೆಗೆ ಪೂರ್ಣಗೊಂಡು ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ. ಕಾಮಗಾರಿ ಪೂರ್ಣಗೊಂಡ ನಂತರ ತೋರಣಗಲ್ಲು ಮತ್ತು ಮುನಿರಾಬಾದ್ ಲೈನ್ಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದ್ದು, ಸ್ಥಳೀಯವಾಗಿ ವಿದ್ಯುತ್ ನಿರ್ವಹಣೆ ಸುಲಭವಾಗಲಿದೆ ಎಂದು ಶಾಸಕರು ತಿಳಿಸಿದರು.

ಜಿಲ್ಲಾ ಗ್ಯಾರೆಂಟಿ ಯೋಜನೆ ಅಧ್ಯಕ್ಷ ಕೆ.ಶಿವಮೂರ್ತಿ, ಎಸ್ಪಿ ಎಸ್.ಜಾಹ್ನವಿ, ಎಎಸ್ಪಿ ಜಿ.ಮಂಜುನಾಥ, ಡಿವೈಎಸ್ಪಿ ಟಿ.ಮಂಜುನಾಥ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ಕೆಪಿಟಿಸಿಎಲ್ ಇಇ ಎಚ್.ಎಂ. ನಟರಾಜ, ತಹಶೀಲ್ದಾರ್ ಶೃತಿ ಎಂ.ಎಂ., ತಾಲ್ಲೂಕು ಪಂಚಾಯಿತಿ ಇಒ ಆಲಂ ಬಾಷಾ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-25-674605486

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.