ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ತಗ್ಗಿದ ತುಂಗಭದ್ರಾ ಜಲಾಶಯದ ಒಳಹರಿವು

Last Updated 19 ಜುಲೈ 2022, 14:45 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಮಂಗಳವಾರ ಇಳಿಕೆ ಕಂಡಿದೆ.

ಮಂಗಳವಾರ 1.45 ಲಕ್ಷ ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಭಾನುವಾರ 1.65 ಲಕ್ಷ ಕ್ಯುಸೆಕ್‌ ಒಳಹರಿವು ಇತ್ತು. ಒಳಹರಿವು ತಗ್ಗಿರುವುದರಿಂದ ನದಿಗೆ ನೀರು ಹರಿಸುವ ಪ್ರಮಾಣವೂ ತಗ್ಗಿದೆ. ನದಿಗೆ ಒಟ್ಟು 1.16 ಲಕ್ಷ ಕ್ಯುಸೆಕ್‌ ನೀರು ಬಿಡಲಾಗುತ್ತಿದೆ. ಕಾಲುವೆಗಳಿಗೆ 7,246 ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ.

ಒಟ್ಟು 105.788 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 98.922 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ನಿತ್ಯ ಸರಾಸರಿ 10 ಟಿಎಂಸಿ ಅಡಿ ನೀರು ಹರಿದು ಬರುತ್ತಿದೆ. ಮಂಗಳವಾರ ಜಿಲ್ಲೆಯಲ್ಲಿ ಮಳೆಯೂ ಬಿಡುವು ಕೊಟ್ಟಿದೆ. ದಿನವಿಡೀ ಮೋಡ ಇತ್ತು. ಸಂಜೆ ಕೆಲನಿಮಿಷ ನಗರದಲ್ಲಿ ತುಂತುರು ಮಳೆಯಾಗಿತ್ತು. ಬೇರೆಲ್ಲೂ ವರ್ಷಧಾರೆಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT