ಹೊಸಪೇಟೆ: ನಗರದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗಾಗಿ ಹೊಸಪೇಟೆ ನಗರಸಭೆಯು ಘನತ್ಯಾಜ್ಯ ವಸ್ತುಗಳ (ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮವನ್ನು ಕಡ್ಡಾಯವಾಗಿ ಜಾರಿಗೊಳಿಸಿದೆ. ಸಾರ್ವಜನಿಕರು ಹಾಗೂ ಉದ್ದಿಮೆದಾರರು ಇನ್ನು ಮುಂದೆ ಕಸವನ್ನು ಕಡ್ಡಾಯವಾಗಿ ವಿಂಗಡಿಸಿ ನೀಡಬೇಕಾಗಿದ್ದು, ನಿಯಮ ಉಲ್ಲಂಘಿಸಿದರೆ ದಂಡ ತೆರಬೇಕಾಗುತ್ತದೆ ಎಂದು ನಗರಸಭೆ ಪೌರಾಯುಕ್ತ ಶಿವಕುಮಾರ್ ಎಚ್ಚರಿಸಿದ್ದಾರೆ.

ನಾಗರಿಕರು, ಕಲ್ಯಾಣ ಮಂಟಪ, ಬಾರ್ ಮತ್ತು ರೆಸ್ಟೋರೆಂಟ್ಗಳ ಮಾಲೀಕರು ಕಸವನ್ನು ಕಡ್ಡಾಯವಾಗಿ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಮತ್ತು ಸ್ಪೆಷಲ್ ಕೇರ್ ವೇಸ್ಟ್ ಎಂಬುದಾಗಿ ನಾಲ್ಕು ಭಾಗಗಳಾಗಿ ವಿಂಗಡಿಸಬೇಕು. ವಿಂಗಡಿಸಿದ ತ್ಯಾಜ್ಯವನ್ನು ನಗರಸಭೆಯ ಆಟೋ ಟಿಪ್ಪರ್ಗಳಿಗೆ ಅಥವಾ ಕಸದ ವಾಹನಗಳಿಗೆ ನೀಡಬೇಕು ಎಂದು ತಿಳಿಸಿದ್ದಾರೆ.

ಘನತ್ಯಾಜ್ಯ ವಸ್ತುಗಳ ವ್ಯವಸ್ಥಾಪನೆ ಮತ್ತು ನಿರ್ವಹಣೆ ನಿಯಮಗಳು-2026ರ ಪ್ರಕಾರ, ಮೂಲದಲ್ಲಿಯೇ ಕಸ ವಿಂಗಡಿಸದೆ ನಿರ್ಲಕ್ಷ್ಯ ವಹಿಸುವವರ ವಿರುದ್ಧ ದಂಡ ವಿಧಿಸಲಾಗುವುದು. ಜಿಲ್ಲೆಯನ್ನು ಸುಂದರ ಮತ್ತು ಸ್ವಚ್ಛ ನಗರವಾಗಿಸಲು ಸಾರ್ವಜನಿಕರು ಹಾಗೂ ಬೃಹತ್ ತ್ಯಾಜ್ಯ ಉತ್ಪಾದಕರು ನಗರಸಭೆಯೊಂದಿಗೆ ಕೈಜೋಡಿಸಬೇಕು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-25-708053596

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.