ಹೊಸಪೇಟೆ: ಗ್ರಾಮೀಣ ಪ್ರದೇಶದ ಸಾರ್ವಜನಿಕರ ಆರೋಗ್ಯ ರಕ್ಷಣೆ ಮತ್ತು ಪ್ರತಿಯೊಬ್ಬರಿಗೂ ಸುರಕ್ಷಿತ ಕುಡಿಯುವ ನೀರು ಖಾತರಿಪಡಿಸುವ ಮಹತ್ತರ ಉದ್ದೇಶದಿಂದ ವಿಶೇಷ ನೀರಿನ ಪರೀಕ್ಷೆಯ ಅಭಿಯಾನಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೋಮವಾರ ಇಲ್ಲಿ ಚಾಲನೆ ನೀಡಿದರು.

ಜೂನ್ 10ರ ವರೆಗೆ ಜಿಲ್ಲೆಯಾದ್ಯಂತ ಈ ವಿಶೇಷ ಆಂದೋಲನ ನಡೆಯಲಿದ್ದು, ಕುಡಿಯುವ ನೀರಿನ ಗುಣಮಟ್ಟದ ಕುರಿತು ಗ್ರಾಮೀಣ ಮಟ್ಟದಲ್ಲೇ ನಿರಂತರ ನಿಗಾ ವಹಿಸುವುದು ಅತ್ಯಗತ್ಯ. ಮಳೆಗಾಲದ ಆರಂಭದ ಈ ದಿನಗಳಲ್ಲಿ ನೀರಿನ ಮೂಲಗಳು ಕಲುಷಿತಗೊಳ್ಳುವ ಸಾಧ್ಯತೆ ಹೆಚ್ಚಿರುವುದರಿಂದ, ಜಲಮೂಲ ಕಲುಷಿಗೊಳ್ಳದಂತೆ ಎಚ್ಚರವಹಿಸಬೇಕು. ಪ್ರತಿಯೊಂದು ಗ್ರಾಮ ಪಂಚಾಯತಿಯೂ ತಮಗೆ ನೀಡಿರುವ ಕಿಟ್ಗಳನ್ನು ಸಮರ್ಪಕವಾಗಿ ಬಳಸಿ, ನಿಯಮಿತವಾಗಿ ನೀರಿನ ಗುಣಮಟ್ಟವನ್ನು ತಪಾಸಣೆ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಾಂಕ್ರಾಮಿಕ ರೋಗ ಮುಕ್ತ ಗ್ರಾಮ ಗುರಿ: ಅಶುದ್ಧ ಹಾಗೂ ಕಲುಷಿತ ನೀರಿನ ಸೇವನೆಯಿಂದ ಗ್ರಾಮೀಣ ಭಾಗದಲ್ಲಿ ಹರಡುವ ಕಾಲರಾ, ಕಾಮಾಲೆ, ಅತಿಸಾರ ಭೇದಿಯಂತಹ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಅತ್ಯಗತ್ಯ ಎಂದ ಅವರು, ಗ್ರಾಮದ ಜಲಮೂಲಗಳಲ್ಲಿ ಕ್ಲೋರಿನೇಷನ್ ಪ್ರಕ್ರಿಯೆಯನ್ನು ಸರಿಯಾದ ಪ್ರಮಾಣದಲ್ಲಿ ನಿರ್ವಹಿಸುವಂತೆ ಮತ್ತು ಶುದ್ಧ ಕುಡಿಯುವ ನೀರಿನ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ತಿಳಿಸಿದರು.

ತಾಲ್ಲೂಕಿನ ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ನೀರು ಸರಬರಾಜು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಹಾಗೂ ಪ್ರತಿದಿನ ನೀರು ಸರಬರಾಜು ಮಾಡುವ ನೀರು ಗಂಟಿಗಳಿಗೆ ಕಾರ್ಯಕ್ರಮದಲ್ಲಿ ವಿಶೇಷ ನೀರಿನ ಪರೀಕ್ಷೆಯ ಕಿಟ್ ವಿತರಿಸಲಾಯಿತು.

ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಹಿರಿಯ ರಸಾಯನ ತಜ್ಞರು ಪ್ರಾಯೋಗಿಕ ತರಬೇತಿ ನೀಡಿದರು. ಕಿಟ್ ಬಳಸಿ ನೀರಿನಲ್ಲಿರುವ ಫ್ಲೋರೈಡ್, ನೈಟ್ರೇಟ್, ಕ್ಲೋರೈಡ್ ಹಾಗೂ ಗಡಸುತನದ ಪ್ರಮಾಣವನ್ನು ಸ್ಥಳದಲ್ಲೇ ಪತ್ತೆ ಹಚ್ಚುವುದು ಹೇಗೆ ಎಂದು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಆಲಂ ಬಾಷಾ, ಎಇಇ ವಿಜಯ್ ಕುಮಾರ್, ಸಹಾಯಕ ಎಂಜಿನಿಯರ್ ಮಹಾರುದ್ರಗೌಡ, ಜ್ಯೂನಿಯರ್ ಎಂಜಿನಿಯರ್ ಸುರೇಶ್, ನರೇಶ್. ಹಿರಿಯ ರಸಾಯನ ತಜ್ಞರು ಅರುಣ್ ಕುಮಾರ್ ಜಿ.ವಿ. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-25-1138372435

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.