ಹೊಸಪೇಟೆ (ವಿಜಯನಗರ): ಕೇಂದ್ರ ಸರ್ಕಾರದ ತೈಲ ಖರೀದಿ ನೀತಿ ಹಾಗೂ ವಿದೇಶಾಂಗ ನೀತಿಗಳಲ್ಲಿ ವಿದೇಶಿ ಒತ್ತಡಗಳಿಗೆ ಒಳಗಾಗಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ವತಿಯಿಂದ ಬುಧವಾರ ಇಲ್ಲಿ ಪ್ರತಿಭಟನೆ ನಡೆಯಿತು.

ವಿಜಯನಗರ ಕಾಲೇಜು ಮುಂಭಾಗದಿಂದ ಅಂಬೇಡ್ಕರ್ ವೃತ್ತದವರೆಗೆ ಬೃಹತ್ ಬ್ಯಾನರ್ನೊಂದಿಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು.

ವಿದೇಶದಿಂದ ಖರೀದಿಸಲಾಗುತ್ತಿರುವ ತೈಲದ ವ್ಯವಹಾರದಲ್ಲಿ ಕೆಲವು ಖಾಸಗಿ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಪ್ರಯತ್ನ ನಡೆಯುತ್ತಿದೆ ಎಂಬ ಅನುಮಾನವನ್ನೂ ಅವರು ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ತಕ್ಷಣ ತನ್ನ ನಿಲುವು ಮರುಪರಿಶೀಲಿಸಿ, ದೇಶದ ಹಿತಾಸಕ್ತಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ರಾಜ್ಯ ಯುವ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ವಿಭಾಗದ ಸಂಯೋಜಕ ಗಣೇಶ್ ಪಾಟೀಲ್, ಜಿಲ್ಲಾ ಉಪ್ಪಾಧ್ಯಕ್ಷ ಜೀಶನ್ ಹ್ಯಾರಿಸ್, ಕಾನೂನು ಘಟಕದ ಅಧ್ಯಕ್ಷ ಅಬ್ದುಲ್ ಕಲಾಂ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಯಾರಿಸ್ವಾಮಿ, ಜಿಲ್ಲಾ ಉಪಾಧ್ಯಕ್ಷೆ ಆಯೇಷಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಲ್ತಾಫ್, ಅರಬಜ್, ರೋಷನ್, ಭರತ್ ಕುಮಾರ್ ಸಿ.ಆರ್., ಹೊಸಪೇಟೆ ಅಧ್ಯಕ್ಷ ಹಾರೋನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-25-1929847608

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.