ಹೊಸಪೇಟೆ: ಸಹಕಾರವು ಶರಣ ಸಂಸ್ಕೃತಿಯ ಜೀವಾಳವೇ ಆಗಿದೆ. ಇಂತಹ ಸಂಘಗಳು ಬಡವರು, ಮಧ್ಯಮ ವರ್ಗದ ಜನರಿಗೆ ಅನುಕೂಲ ಮಾಡಿಕೊಡಬೇಕಿದೆ ಎಂದು ಕೊಟ್ಟೂರು ಸಂಸ್ಥಾನ ಮಠದ ಬಸವಲಿಂಗ ಸ್ವಾಮೀಜಿ ಹೇಳಿದರು.

ಭಾನುವಾರ ಇಲ್ಲಿ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರ ಸಂಘದ ಹೊಸಪೇಟೆ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ‘ಪಾರದರ್ಶಕ ಆಡಳಿತ ನೀಡಿದರೆ ಖಂಡಿತ ಸಹಕಾರ ಕ್ಷೇತ್ರದ ಬೆಳವಣಿಗೆ ಆಗಲಿದೆ’ ಎಂದರು.

ಸಂಡೂರಿನ ಪ್ರಭುದೇವರ ವಿರಕ್ತಮಠದ ಸ್ವಾಮೀಜಿಗಳಾದ ಪ್ರಭುಸ್ವಾಮಿಗಳು ಆಶೀರ್ವಚನ ನೀಡಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿಯಮಿತದ ಅಧ್ಯಕ್ಷ ಜೀ. ನಂಜನಗೌಡ ಮಾತನಾಡಿ, ‘ಸಹಕಾರಸಂಸ್ಥೆ ನಿಜಕ್ಕೂ ಆರ್ಥಿಕವಾಗಿ ಸುಭದ್ರವಾಗಿದೆ’ ಎಂದರು.

ಬಳ್ಳಾರಿ ಶ್ರೇಷ್ಠ ಸಹಕಾರಿ ರತ್ನ ಪ್ರಶಸ್ತಿ ಪಡೆದಿರುವ ಜಿ.ನೀಲಕಂಠಪ್ಪ ಅವರನ್ನು ಹಾಗೂ ವಿವಿಧ ಗಣ್ಯರನ್ನು ಸನ್ಮಾನಿಸಲಾಯಿತು. ಬ್ಯಾಂಕಿನ ಆಡಳಿತ ಮಂಡಳಿಯ ಅಧ್ಯಕ್ಷ ಕಲ್ಗುಡಿ ಮಂಜುನಾಥ ಪ್ರಾಸ್ತಾವಿಕ ಮಾತನಾಡಿದರು. ಪ್ರೊ. ಮೃತ್ಯುಂಜಯ ರುಮಾಲೆ ಅವರು ಬರೆದ ‘ಶರಣ ಸಕ್ಕರೆ ಕರಡೆಪ್ಪನವರು’ ಕೃತಿ ಬಿಡುಗಡೆ ಮಾಡಲಾಯಿತು. ಷಾ ಭವರಲಾಲ್ ನಾಹರ್ ಬಿ.ಇಡಿ ಕಾಲೇಜಿನ ಅಧ್ಯಕ್ಷ ಗುಡೇಕೋಟೆ ನಾಗರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.