ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ ನಗರಸಭೆ: ಲತಾ ಅಧ್ಯಕ್ಷೆ, ರೂಪೇಶ್‌ ಉಪಾಧ್ಯಕ್ಷ

Published 6 ಜುಲೈ 2023, 10:44 IST
Last Updated 6 ಜುಲೈ 2023, 10:44 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಹೊಸಪೇಟೆ ನಗರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ  ಪಕ್ಷೇತರ ಅಭ್ಯರ್ಥಿ ಎ.ಲತಾ ಹಾಗೂ ಉಪಾಧ್ಯಕ್ಷರಾಗಿ ರೂಪೇಶ್ ಕುಮಾರ್ ಆಯ್ಕೆಯಾಗಿದ್ದಾರೆ.

ಬಿಜೆಪಿಗೆ ಬೆಂಬಲ ಸೂಚಿಸಿರುವ 30ನೇ ವಾರ್ಡ್‌ನ ಪಕ್ಷೇತರ ಸದಸ್ಯೆ ಎ.ಲತಾ ಮತ್ತು ಕಾಂಗ್ರೆಸ್‌ನ  7ನೇ ವಾರ್ಡ್‌ನ ಸದಸ್ಯೆ ಬಿ.ಕನಕಮ್ಮ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಲತಾ ಅವರಿಗೆ 22 ಮತಗಳು ಲಭಿಸಿದರೆ, ಕನಕಮ್ಮ ಅವರಿಗೆ 7 ಮತಗಳು ಲಭಿಸಿದವು. ಉಪಾಧ್ಯಕ್ಷ ಸ್ಥಾನಕ್ಕೆ 5ನೇ ವಾರ್ಡ್‌ನ ಬಿಜೆಪಿ ಸದಸ್ಯ ರೂಪೇಶ್ ಕುಮಾರ್ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅವರು ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿತ್ತು.

2021ರ ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 12, ಬಿಜೆಪಿ 10, ಎಎಪಿ 1 ಹಾಗೂ 12 ಮಂದಿ ಪಕ್ಷೇತರರು ಗೆಲುವು ಸಾಧಿಸಿದ್ದರು. ಆಗ ಆನಂದ್‌ ಸಿಂಗ್ ಅವರ ಪ್ರಭಾವ ನಗರಸಭೆ ಮೇಲೆ ಗಾಢವಾಗಿತ್ತು. ಪಕ್ಷೇತರ ಸದಸ್ಯರ ಬೆಂಬಲದೊಂದಿಗೆ ಬಿಜೆಪಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ  ಸ್ಥಾನ ಲಭಿಸಿತ್ತು.

ವಿಧಾನಸಭಾ ಚುನಾವಣೆಯಲ್ಲಿ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ ಸಿಂಗ್ ಅವರಿಗೆ ಸೋಲು ಉಂಟಾಯಿತು. ಫಲಿತಾಂಶ ಬಂದು ಒಂದು ತಿಂಗಳೊಳಗೆಯೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಆನಂದ್ ಸಿಂಗ್ ಅವರ ಪ್ರಭಾವ ಕಡಿಮೆಯಾಗಿದೆ ಎಂದು ಭಾವಿಸಲಾಗಿತ್ತು. ಆದರೆ ನಗರಸಭೆಯ ಬಹುತೇಕ ಪಕ್ಷೇತರ ಸದಸ್ಯರ ಮೇಲೆ ಹಿಡಿತ ಸಾಧಿಸಿರುವ ಅವರು, ಮತ್ತೆ ಬಿಜೆಪಿಯ ಬಳಿಯಲ್ಲೇ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಉಳಿಯುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಚುನಾವಣೆ ನಡೆಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT