ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ | ಲಂಚ ಪ್ರಕರಣ: ಪಿಎಸ್‌ಐ, ನಾಲ್ವರು ಕಾನ್‌ಸ್ಟೆಬಲ್‌ ಅಮಾನತು

Last Updated 13 ಡಿಸೆಂಬರ್ 2021, 5:02 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಲಂಚ ಪ್ರಕರಣ ಸಂಬಂಧ ಕೊಟ್ಟೂರು ಪೊಲೀಸ್‌ ಠಾಣೆಯ ಪಿಎಸ್‌ಐ ಹಾಗೂ ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ಭಾನುವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಈ ವಿಷಯವನ್ನು ಸ್ವತಃ ಅವರೇ 'ಪ್ರಜಾವಾಣಿ'ಗೆ ದೃಢಪಡಿಸಿದ್ದಾರೆ. ಪಿಎಸ್‌ಐ ಎಚ್‌. ನಾಗಪ್ಪ, ಎಎಸ್‌ಐ ಸೈಫುಲ್ಲಾ, ಕಾನ್‌ಸ್ಟೆಬಲ್‌ಗಳಾದ ಕೊಂಡಿ ಬಸವರಾಜ, ನಾಗರಾಜ, ತಿಪ್ಪೇಸ್ವಾಮಿ ಅಮಾನತುಗೊಂಡವರು. ಸಿಪಿಐ ಟಿ.ಎಸ್‌. ಮುರಗೇಶ್‌ ಕುರಿತು ಬಳ್ಳಾರಿ ವಲಯದ ಐ.ಜಿ. ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಅಕ್ರಮ ಮರಳು ಸಾಗಾಟ ಪ್ರಕರಣ ಕೈಬಿಡಲು ಕೂಡ್ಲಿಗಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ. ವೆಂಕಟೇಶ ನಾಯ್ಕ ಅವರಿಂದ ಲಂಚ ಪಡೆಯುತ್ತಿದ್ದ ಕೊಟ್ಟೂರು ಪೊಲೀಸ್‌ ಠಾಣೆಯ ಸಿಪಿಐ, ಪಿಎಸ್‌ಐ ಹಾಗೂ ನಾಲ್ವರು ಸಿಬ್ಬಂದಿ ಶನಿವಾರ ₹2.5 ಲಕ್ಷ ಲಂಚದ ಹಣದ ಸಮೇತ ಎಸಿಬಿ ಬಲೆಗೆ ಬಿದ್ದಿದ್ದರು. ₹10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ₹2.5 ಲಕ್ಷ ಮುಂಗಡ ಪಡೆಯುವಾಗ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT