ಹೊಸಪೇಟೆ (ವಿಜಯನಗರ): 'ಜಿಲ್ಲೆಯಾದ್ಯಂತ ಡಿ.21 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಆಯೋಜಿಸಿದ್ದು, ಐದು ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ವಂಚಿತವಾಗದಂತೆ ನಿಗಾವಹಿಸಬೇಕು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ, ಡಿಟಿಎಫ್ಐ ದಡಾರ ಮತ್ತು ರುಬೇಲ್ಲಾ ನಿರ್ಮೂಲನಾ ಕಾರ್ಯಕ್ರಮದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

‘ಪೋಲಿಯೋ ಮುಕ್ತ ಭಾರತ ನಿರ್ಮಾಣಕ್ಕೆ ಸರ್ಕಾರಗಳು ಹೆಚ್ಚಿನ ಉತ್ತೇಜನ ನೀಡಿದ ಹಿನ್ನಲೆಯಲ್ಲಿ ಸದ್ಯಕ್ಕೆ ದೇಶದಲ್ಲಿ ಪೋಲಿಯೋ ಪ್ರಕರಣಗಳು ದಾಖಲಾಗದಿರುವುದು ಹೆಮ್ಮೆಯ ವಿಷಯ. ವಿವಿಧ ಇಲಾಖೆಗಳ ಸಹಕಾರ ತೆಗೆದುಕೊಂಡು ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಲಸಿಕೆಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.

‘ಆರೋಗ್ಯ ಇಲಾಖೆ ಜತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಯಶಸ್ವಿಗೊಳಿಸಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಶೇ 100ರಷ್ಟು ಪ್ರಗತಿ ಸಾಧಿಸಬೇಕು’ ಎಂದು ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಂಕರ್ ನಾಯ್ಕ್ ಎಲ್.ಆರ್ ಮಾತನಾಡಿ, ‘ಜಿಲ್ಲೆಯಲ್ಲಿ 1,21,585 ಐದು ವರ್ಷದೊಳಗಿನ ಮಕ್ಕಳು ಇದ್ದು, ಒಟ್ಟು 1,040 ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತದೆ. 923 ತಂಡಗಳನ್ನು ರಚಿಸಲಾಗಿದ್ದು, ನಾಲ್ಕು ಮೊಬೈಲ್ ತಂಡ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 50 ಟ್ರಾನ್ಸಿಟ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. 2,170 ಲಸಿಕಾ ಕಾರ್ಯಕರ್ತರನ್ನು ನಿಯೋಜನೆ ಮಾಡಲಾಗಿದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಂಯೋಜಕ ಜೆ.ಎಂ.ಅನ್ನದಾನಸ್ವಾಮಿ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಜಂಬಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಷಣ್ಮುಖ ನಾಯ್ಕ, ಜಿಲ್ಲಾ ವೈದ್ಯಾಧಿಕಾರಿ ಡಾ. ಭಾಸ್ಕರ್, ಡಾ. ರಾಧಿಕಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.