ಹೊಸಪೇಟೆ (ವಿಜಯನಗರ): ಗ್ರಾಹಕರು ಯಾವುದೇ ರೀತಿಯ ಉತ್ಪನ್ನ ಖರೀದಿಸಬೇಕಾದರೆ ಉತ್ಪನ್ನದ ಪ್ರಮಾಣ ಮತ್ತು ಗುಣಮಟ್ಟ ಖಾತರಿಪಡಿಸಿಕೊಂಡು ಖರೀದಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಹೇಳಿದರು.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತಾ ಇಲಾಖೆ ಸಹಯೋಗದಲ್ಲಿ ಮಂಗಳವಾರ ಇಲ್ಲಿ ಆಯೋಜಿಸಿದ ವಿಶ್ವ ಗ್ರಾಹಕರ ಹಕ್ಕು ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರತಿಯೊಬ್ಬ ಗ್ರಾಹಕನೂ ತಾನು ಖರೀದಿಸುವ ವಸ್ತುಗಳ ಗುಣಮಟ್ಟ, ತೂಕ ಮತ್ತು ಅಳತೆ ಪ್ರಮಾಣದ ಬಗ್ಗೆ ಅರಿತಿರಬೇಕು. ಗ್ರಾಹಕನೇ ಮಾರುಕಟ್ಟೆಯ ರಾಜ ಎನ್ನುವ ಮಾತು ಅನ್ವಯವಾಗಬೇಕಾದರೆ, ಗ್ರಾಹಕರು ಸಹ ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿರಬೇಕು. ಗ್ರಾಹಕರು ವಿವಿಧ ಮಾಧ್ಯಮಗಳಲ್ಲಿ ಬಿತ್ತರಿಸುವ ಆಕರ್ಷಣೀಯ ಜಾಹೀರಾತುಗಳಿಗೆ ಮಾರು ಹೋಗಿ ಉತ್ಪನ್ನ ಖರೀದಿಸಬಾರದು. ಬದಲಾಗಿ ಉತ್ಪನ್ನದ ಗುಣಮಟ್ಟ, ಸುರಕ್ಷತೆಯ ಬಗ್ಗೆ ಪರಿಶೀಲಿಸಿ ಖರೀದಿಸಬೇಕು’ ಎಂದರು.

ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷ ಎನ್. ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಕೀಲ ಕರುಣಾನಿಧಿ ಗ್ರಾಹಕ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ತಾತ್ಕಾಲಿಕ ಮಳಿಗೆ ಸ್ಥಾಪಿಸಿ ಗ್ರಾಹಕರಿಗೆ ಅರಿವು ಮೂಡಿಸಲಾಯಿತು. ಆಹಾರ ಇಲಾಖೆಯ ಉಪನಿರ್ದೇಶಕ ರಿಯಾಜ್, ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಮನೋಜ್ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಗುಜ್ಜಲ ನಾಗರಾಜ್, ಕಾರ್ಯದರ್ಶಿ ಕೃಷ್ಣದೇವರಾಯಲು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-25-483975061

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.