ಹೊಸಪೇಟೆ: ಪ್ರವಾಸಿಗರ ಅನುಕೂಲ ಕ್ಕಾಗಿ ಹೋಂ ಸ್ಟೇ ಪ್ರಾರಂಭಿಸಲು ಕೆ.ಟಿ.ಟಿ.ಎಫ್-2015 ಕಾಯ್ದೆಯಂತೆ ಪ್ರವಾ ಸೋದ್ಯಮ ಇಲಾಖೆಯಡಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ. ಆದರೆ ಜಿಲ್ಲೆಯ ವಿಶ್ವ ಪಾರಂಪರಿಕ ತಾಣವಾದ ಹಂಪಿ, ಕಮಲಾಪುರ ವ್ಯಾಪ್ತಿಯಲ್ಲಿ ಹಾಗೂ ಜಿಲ್ಲೆಯ ಇತರೆ ಸ್ಥಳಗಳಲ್ಲಿ ಪ್ರವಾ ಸೋದ್ಯಮ ಇಲಾಖೆಯಡಿ ನೋಂದಣಿ ಮಾಡಿಕೊಳ್ಳದೇ ಹಲವು ಹೋಂ ಸ್ಟೇ ಕಾರ್ಯ ನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಇಲಾಖೆ ತಿಳಿಸಿದೆ.

ಪ್ರವಾಸೋದ್ಯಮ ಇಲಾಖೆಯಿಂದ ಯಾವುದೇ ಅಧಿಕೃತ ಅನುಮೋದನೆ ಅಥವಾ ನೋಂದಣಿ ಮಾಡಿಕೊಳ್ಳದೇ ಇರುವ ಹೋಂ ಸ್ಟೇಗಳನ್ನು ಅನಧೀಕೃತ ಹೋಂ ಸ್ಟೇಗಳೆಂದು ಪರಿಗಣಿಸಲಾಗುತ್ತದೆ ಎಂದು ಅದು ಸ್ಪಷ್ಟಪಡಿಸಿದೆ.

ಹೋಂ ಸ್ಟೇಗಳನ್ನು ಕಾನೂನುಬದ್ಧವಾಗಿ ಮುಂದುವರಿಸಲು ಆಸಕ್ತಿ ಇರುವ ಮಾಲೀಕರು ಅಗತ್ಯ ದಾಖಲೆಗಳೊಂದಿಗೆ ಕಮಲಾಪುರದ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಿ, ಹೋಂ ಸ್ಟೇ ನೋಂದಣಿಗೆ ಅರ್ಜಿ ಸಲ್ಲಿಸಿ, ನೋಂದಣಿ ಪ್ರಮಾಣ ಪತ್ರ ಪಡೆಯಬೇಕು. ನೋಂದಣಿ ಇಲ್ಲದೆ ನಡೆಯುತ್ತಿರುವ ಹೋಂ ಸ್ಟೇಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು. ಈ ಆದೇಶವನ್ನು ಉಲ್ಲಂಘಿಸಿ, ಯಾವುದೇ ಹೋಂ ಸ್ಟೇ ಮಾಲೀಕರು ಪ್ರವಾಸಿಗರಿಗೆ ಉಳಿದುಕೊಳ್ಳಲು ಕೊಠಡಿ ಗಳನ್ನು ನೀಡಿರುವುದು ಕಂಡುಬಂದಲ್ಲಿ ಕೆ.ಟಿ.ಟಿ.ಎಫ್-2015ರ ಕಾಯ್ದೆಯಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-25-169483220

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.