ಬುಧವಾರ, ನವೆಂಬರ್ 30, 2022
19 °C

ಹೊಸಪೇಟೆ: ಲೋಕಾಯುಕ್ತ ಪೊಲೀಸರಿಂದ ಚೆಕ್‌ಪೋಸ್ಟ್‌ ಮೇಲೆ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಲೋಕಾಯುಕ್ತ ಪೊಲೀಸರು ನಗರ ಹೊರವಲಯದ ಶನೇಶ್ವರ ದೇವಾಲಯದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶುಕ್ರವಾರ ಸಾರಿಗೆ ಇಲಾಖೆಯ ಮೊಬೈಲ್‌ ಚೆಕ್‌ಪೋಸ್ಟ್‌ ಮೇಲೆ ದಾಳಿ ನಡೆಸಿದರು.

ಲೋಕಾಯುಕ್ತ ಡಿವೈಎಸ್ಪಿ ಅಯ್ಯನಗೌಡ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ ವೇಳೆ ಚೆಕ್‌ಪೋಸ್ಟ್‌ನಲ್ಲಿ ಯಾರೊಬ್ಬರೂ ಇರಲಿಲ್ಲ ಎಂದು ಗೊತ್ತಾಗಿದೆ. ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ತಪಾಸಣೆ ನೆಪದಲ್ಲಿ ಚಾಲಕರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿರುವುದರಿಂದ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು