ಹೊಸಪೇಟೆ: ನಗರದ ಅನಂತಶಯನ ಗುಡಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಬಹಳ ನಿಧಾನಗತಿಯಲ್ಲಿ ನಡೆಯುತ್ತಿರುವುದನ್ನು ವಿರೋಧಿಸಿದ ಸ್ವತಃ ಶಾಸಕ ಎಚ್.ಆರ್.ಗವಿಯಪ್ಪ ಅವರೇ ಪ್ರತಿಭಟನೆಗೆ ಇಳಿದ ಪ್ರಸಂಗ ಬುಧವಾರ ನಡೆಯಿತು.

‘ಮೇಲ್ಸೇತುವೆ ನಿರ್ಮಾಣಕ್ಕೆ ಇದ್ದ ಕೆಲವು ತೊಡಕುಗಳನ್ನು ನಿವಾರಿಸಿದ ಮೇಲೂ ವಿಳಂಬ ಏಕೆ ಎಂದು ಪ್ರಶ್ನಿಸಿದ ಶಾಸಕರು, ಸ್ಥಳಕ್ಕೆ ರೈಲ್ವೆ ಅಧಿಕಾರಿಗಳನ್ನು ಮತ್ತು ಗುತ್ತಿಗೆದಾರರನ್ನು ಕರೆಸಿ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ತಹಶೀಲ್ದಾರ್ ಶ್ರುತಿ ಅವರ ಸಮ್ಮುಖದಲ್ಲೇ ತರಾಟೆಗೆ ತೆಗೆದುಕೊಂಡರು.

‘ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಬಿಟ್ಟು ಹೋಗಿ‘ ಎಂದು ಎಚ್ಚರಿಕೆ ನೀಡಿದರು.

ಡಿವೈಎಸ್ಪಿ ಮುರಳೀಧರ, ಮುಖಂಡರಾದ ಅಯ್ಯಾಳಿ ತಿಮ್ಮಪ್ಪ, ಗಿಂಜಿ ಮಂಜು, ಗುಜ್ಜಲ ನಿಂಗಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-25-380604774

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.