ಹೊಸಪೇಟೆ (ವಿಜಯನಗರ): ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದರೂ, ಸಂವಿಧಾನದ 9ನೇ ಶೆಡ್ಯೂಲ್ನಲ್ಲಿ ಅದನ್ನು ಸೇರಿಸಬೇಕಿದೆ, ಈ ಕೆಲಸವನ್ನು ತಕ್ಷಣ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಿಪಿಎಂ ವತಿಯಿಂದ ಸೋಮವಾರ ಇಲ್ಲಿನ ಸಂಸದರ ಕಚೇರಿ ಬಳಿ ಪ್ರತಿಭಟನೆ ನಡೆಯಿತು.

ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಯು.ಬಸವರಾಜ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಒಳ ಮೀಸಲಾತಿ ಜಾರಿ ವಿಷಯವು ಮೀಸಲಾತಿ ಪ್ರಮಾಣ ಹೆಚ್ಚಳ ವಿಷಯದ ಜೊತೆಯೂ ತಳಕು ಹಾಕಿಕೊಂಡಿರುವುದರಿಂದ ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರಿಸುವ ಕೆಲಸ ಅತ್ಯಂತ ಅಗತ್ಯವಾಗಿ ಆಗಬೇಕಿದೆ. ಹೀಗಾಗಿ ಸಂಸತ್ ಸದಸ್ಯರಾಗಿರುವ ತಾವು ಕರ್ನಾಟಕ ರಾಜ್ಯದ ಜನತೆಯ ಹಿತವನ್ನು ಕಾಯಲು ಪಕ್ಷಭೇದ ಮರೆತು ಕೇಂದ್ರ ಸರ್ಕಾರ ಅನುಮೋದನೆ ನೀಡುವ ನಿಟ್ಟಿನಲ್ಲಿ ಯತ್ನಿಸಬೇಕು ಎಂದು ಒತ್ತಾಯಿಸಲಾಯಿತು.

ಒತ್ತಾಯ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕರ್ನಾಟಕದ ತೀರ್ಮಾನಕ್ಕೆ ಕೇಂದ್ರದ ಎನ್ಡಿಎ ಸರ್ಕಾರ ಕೂಡಲೇ ಅನುಮೋದನೆ ನೀಡಬೇಕು. ಇದನ್ನು ಸಂವಿಧಾನದ ಶೆಡ್ಯೂಲ್ 9ರಲ್ಲಿ ಸೇರಿಸಿ ಕೇಂದ್ರದಲ್ಲಿ ಇರುವಂತೆ ಶೇ 17 ಮತ್ತು ಶೇ 7ರ ಜಾರಿಗೆ ಅನುವು ಮಾಡಿಕೊಡಬೇಕು. ಕೇಂದ್ರವು ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಬೇಕು. ಬ್ಯಾಕ್ ಲಾಗ್ ಹುದ್ದೆಗಳನ್ನು ಯಾವುದೇ ಸಂದರ್ಭದಲ್ಲಿ ಸಾಮಾನ್ಯ ಗುಂಪಿಗೆ ವರ್ಗಾಯಿಸಬಾರದು. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಸುಮಾರು 3 ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಬೇಕು ಎಂಬ ಪ್ರಮುಖ ಬೇಡಿಕೆ ಸಹಿತ 11ಕ್ಕೂ ಅಧಿಕ ಬೇಡಿಕೆಗಳನ್ನು ಮುಂದಿಟ್ಟು ಈ ಹೋರಾಟ ನಡೆಯಿತು.

ಪಕ್ಷದ ಪ್ರಮುಖರಾದ ಆರ್. ಭಾಸ್ಕರ್ ರೆಡ್ಡಿ, ಎನ್. ಯಲ್ಲಾಲಿಂಗ, ಆರ್.ಎಸ್. ಬಸವರಾಜ, ಬಿ.ಮಾಳಮ್ಮ, ಕೆ.ಎಂ.ಫ್ವಪ್ನ, ಎಂ.ಗೋಪಾಲ, ಎಂ.ಜಂಬಯ್ಯ ನಾಯಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.